ತಂಬಾಕು ನಿಯಂತ್ರಣ ಕಾಯ್ದೆ ಅಡಿ ಅರೋಗ್ಯ ಇಲಾಖೆ ಬಿಬಿಎಂಪಿ ವ್ಯಾಪ್ತಿಯ 412 ಬಾರ್, ಹೋಟೆಲ್, ರೆಸ್ಟೋರೆಂಟ್ ಗಳಿಗೆ ನೋಟಿಸ್ ನೀಡಿ, ಧೂಮಪಾನ ವಲಯ ಸ್ಥಾಪಿಸುವಂತೆ ಹೇಳಿದೆ.
ನಗರದ ಬಹುತೇಕ ಬಾರ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಮೋಕಿಂಗ್ ಜೋನ್ ಇಲ್ಲ, ತಂಬಾಕು ನಿಯಂತ್ರಣ ಕಾಯ್ದೆ ಅಡಿ ಸ್ಮೋಕಿಂಗ್ ಜೋನ್ ಕಡ್ಡಾಯ ಎಂದು ಇಲಾಖೆ ತಿಳಿಸಿದೆ.
ಇನ್ಮುಂದೆ 30 ಅಸನಕ್ಕಿಂತ ಹೆಚ್ಚಿನ ಅಸನ ಇರುವ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಸ್ಮೋಕಿಂಗ್ ಜೋನ್ ಕಡ್ಡಾಯ. ನೋಟೀಸ್ ನೀಡಿದ 7 ದಿನಗಳಲ್ಲಿ ಸ್ಮೋಕಿಂಗ್ ವಲಯ ಸ್ಥಾಪಿಸಬೇಕು
ಇಲ್ಲವಾದರೆ ವ್ಯಾಪಾರಕ್ಕೆ ಕೊಟ್ಟಿರುವ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.