ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು.
ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರೊಂದು ಡಿವೈಡರ್ ಜಂಪ್ ಮಾಡಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸು ನೀಗಿದ್ದರೆ, ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿ ವೇಗವಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಹಠಾತ್ತನೆ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಡಿವೈಡರ್‌ಗೆ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್ಸಿನ ಮುಂಭಾಗ ಹಾನಿಗೊಂಡಿದೆ. ದೇವನಹಳ್ಳಿ ಸಂಚಾರಿ ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ. ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ.


