Menu

ಚಿತ್ತೂರಿನಲ್ಲಿ ಲಾರಿಗೆ ಕಾರು ಡಿಕ್ಕಿ: ರಾಜ್ಯದ ಐವರು ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ತಿರುಪತಿ ಕಡೆಗೆ ತೆರಳುತ್ತಿದ್ದ ಕಾರು ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಐವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೃತಪಟ್ಟವರೆಲ್ಲರೂ ಕರ್ನಾಟಕದ ನಿವಾಸಿಗಳು. ಅವರು ಬೆಂಗಳೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟಿದ್ದರು ಎನ್ನಲಾಗುತ್ತಿದೆ. ಪೊಲೀಸರು ಕಾರಿನ ನಂಬರ್ ಪ್ಲೇಟ್ ಹಾಗೂ ಒಳಗಿದ್ದ ದಾಖಲೆಗಳನ್ನು ಆಧರಿಸಿ ಮೃತರ ಪೂರ್ಣ ವಿಳಾಸ ಮತ್ತು ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯಗೊಂಡಿತು. ಅಪಘಾತಗೊಂಡ ವಾಹನಗಳನ್ನು ಕ್ರೇನ್ ಸಹಾಯದಿಂದ ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ.

Related Posts

Leave a Reply

Your email address will not be published. Required fields are marked *