ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ವ್ಯಕ್ತಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದದಿದಾರೆ.
ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್ ನೋಟ್‌ನಲ್ಲಿ ಬಾಬು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.