ಚಿತ್ರದುರ್ಗದ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು.
ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೊಳಲ್ಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.