Menu

ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಕಾರು ಡಿಕ್ಕಿ: ಬೈಕ್‌ ಸವಾರ ಸಾವು

ಬೆಂಗಳೂರಿನ ಕಗ್ಗದಾಸನಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

೩೩ ವರ್ಷದ ನವೀನ್‌ ಮೃತಪಟ್ಟವರು. ಅವರು ವಿಜ್ಞಾನನಗರ ಸಿಗ್ನಲ್‌ನಲ್ಲಿ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದರು. ವೇಗವಾಗಿ ಬಂದ ಕಾರು ಹಿಂಬದಿಯಿಂದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ 50 ಅಡಿ ದೂರು ಹಾರಿ ಬಿದ್ದು ಸವಾರ ಅಸು ನೀಗಿದ್ದಾರೆ. ನವೀನ್‌ ಕಟೀಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಕಾರು ಚಾಲಕನನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *