Menu

ಎಚ್.ವಿಶ್ವನಾಥ್, ಮಂಜುನಾಥ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಎಚ್.ವಿಶ್ವನಾಥ್, ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!
ಬೆಂಗಳೂರು: ವಿಧಾನಪರಿಷತ್ ಸದಸ್ಯ ಬಿ.ಎಸ್. ಶಿವಣ್ಣ (ಮಳವಳ್ಳಿ ಶಿವಣ್ಣ) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ಮಾಜಿ ಶಾಸಕ ಎ. ಮಂಜುನಾಥ್ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಇಬ್ಬರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಮಾನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರ ಎಚ್. ವಿಶ್ವನಾಥ್ ಹಾಗೂ ಎ. ಮಂಜುನಾಥ್ ಪರ ವಕೀಲರು ಗೈರು ಹಾಜರಾಗಿದ್ದರು. ಪ್ರತಿವಾದಿ ಪರ ವಕೀಲರು ಪ್ರಕರಣದಲ್ಲಿ ವಾದ ಮಂಡಿಸಿಲು ಸಿದ್ಧರಿದ್ದು, ಅರ್ಜಿದಾರರ ಪರ ವಕೀಲರನ್ನು ತಮ್ಮ ವಾದ ಮಂಡಿಸುವಂತೆ ಕೋರಿಕೊಂಡಿದ್ದಾರೆ.

ಆದರೆ ನ್ಯಾಯಪೀಠ, ಅರ್ಜಿದಾರರ ಪರ ವಕೀಲರು ಸತತ ಗೈರು ಹಾಜರಾಗಿದ್ದಾರೆ. ಮುಂದಿನ ವಿಚಾರಣೆ ವೇಳೆ ಹಾಜರಾಗದಿದ್ದರೆ ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ಈ ಹಿಂದೆ ನಡೆದ ವಿಚಾರಣೆ ವೇಳೆ (ಸೆ.25) ಆದೇಶಿಸಿ ವಿಚಾರಣೆಯನ್ನು ಅಕ್ಟೋಬರ್​ 1ಕ್ಕೆ ಮುಂದೂಡಲಾಗಿತ್ತು. ಆದರೆ, ಅರ್ಜಿದಾರರ ಪರ ವಕೀಲರು ಪುನಃ ಗೈರು ಹಾಜರಾಗಿದ್ದರಿಂದ ಅರ್ಜಿಗಳನ್ನು ವಜಾಗೊಳಿಸುತ್ತಿರುವುದಾಗಿ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುವ ವೇದಿಕೆಯಲ್ಲಿ ಸಿದ್ದರಾಮಯ್ಯ ಜೊತೆ ಬಿ.ಎಸ್. ಶಿವಣ್ಣ ಇದ್ದರು. ಇದನ್ನು ಆಕ್ಷೇಪಿಸಿದ್ದ ಎಚ್. ವಿಶ್ವನಾಥ್, ಸರ್ಕಾರದ ಯಾವುದೇ ಹುದ್ದೆಯಲ್ಲಿ ಇಲ್ಲದ, ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ಸಿಎಂ ಪ್ರಮಾಣ ವಚನ ಸ್ವೀಕಾರದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದರು.ಅಲ್ಲದೇ ಈ ವಿಚಾರವಾಗಿ ರಾಜ್ಯಪಾಲರಿಗೆ ಪತ್ರ ಸಹ ಬರೆದಿದ್ದರು. ಇದರ ವಿರುದ್ಧ ಶಿವಣ್ಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಅದನ್ನು ವಿಚಾರಣೆಗೆ ಅಂಗೀಕರಿಸಲಾಗಿತ್ತು. ಆದ್ದರಿಂದ ಪ್ರಕರಣ ರದ್ದುಪಡಿಸುವಂತೆ ಕೋರಿ ವಿಶ್ವನಾಥ್ ಹಾಗೂ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು.

#vishwanatha #Malavallishivanna #Manjunath #ಉದಯಕಾಲ #Udayakala

Related Posts

Leave a Reply

Your email address will not be published. Required fields are marked *