Menu

ಚಿಕ್ಕಮಗಳೂರಿನಲ್ಲಿ ಹಸು ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕನ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್‌ ಸ್ಪ್ರೇ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಾಲಕ ನಡೆಸಿರುವ ಈ ದುಷ್ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವುಂಟು ಮಾಡಿದೆ.

ಸಂಜೆ ರಸ್ತೆಯಲ್ಲಿ ನಿಂತಿದ್ದ ಹಸುವಿನ ಬಾಲಕ್ಕೆ ಬಾಲಕ ಕೈಯಲ್ಲಿದ್ದ ಸೆಂಟ್ ಸ್ಪ್ರೇಯನ್ನು ಸಿಂಪಡಿಸಿದ ಬಳಿಕ ಬೆಂಕಿ ಹಚ್ಚಿದ್ದಾನೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಬಾಲಕನನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಾಲಕನ ಕೃತ್ಯಕ್ಕೆ ಆಕ್ರೋಶಗೊಂಡು ಥಳಿಸಿರುವ ಆರೋಪ ಕೇಳಿ ಬಂದಿದೆ.

ಬಸವನಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹಸುವಿಗೆ ಬೆಂಕಿ ಹಚ್ಚಿದ ಕುರಿತು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಮಗನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಬಾಲಕನ ತಾಯಿ ಶಬನಾ ಬಾನು ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಾಬಾ ಮೇಲೆ ಪ್ರಧಾನಿ ಮೋದಿ, ಸಿಎಂ ಆದಿತ್ಯನಾಥ್‌ ಪೋಟೊ: ಆರೋಪಿಯ ಬಂಧನ

ಮೆಕ್ಕಾದ ಕಾಬಾ ಮೇಲೆ ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಭಗವಾಧ್ವಜ ಹಿಡಿದು ನಿಂತಿರುವಂತೆ ಎಡಿಟ್ ಮಾಡಿದ ಪೋಟೊವನ್ನು ವೈರಲ್ ಮಾಡಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಜೇವರ್ಗಿಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಆನಂದ ಗುತ್ತೇದಾರ್‌ ಬಂಧಿತ ಆರೋಪಿ. ಆತ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕಾಬಾ ಮೇಲೆ ಭಗವಾಧ್ವಜ ಹಿಡಿದಿರುವ ನರೇಂದ್ರ ಮೋದಿ, ಆದಿತ್ಯನಾಥ್ ಪೋಟೊವನ್ನು
ಎಡಿಟ್‌ ಮಾಡಿ ಶೇರ್‌ ಮಾಡಿದ್ದ. ಈ ಸಂಬಂಧ ಸಯ್ಯದ್ ಪಟೇಲ್ ಎಂಬವರು ಜೇವರ್ಗಿ ಠಾಣೆಗೆ ದೂರು ನೀಡಿದ್ದಾರೆ.

ಜೇವರ್ಗಿ ಠಾಣೆ ಮುಂದೆ ಒಂದು ಕೋಮಿನ ಯುವಕರು ಜಮಾಯಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಪೊಲೀಸರು ಆನಂದ ಗುತ್ತೇದಾರ್‌ನನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *