Menu

ವಿಜಯಪುರ ಬ್ಯಾಂಕ್ ದರೋಡೆ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಅರೆಸ್ಟ್

bank manager

ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.

ಮೇ 25ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿತ್ತು. ಸ್ವತಃ ಬ್ಯಾಂಕ್ ಮ್ಯಾನೇಜರ್ ದರೋಡೆಗೆ ಸ್ಕೆಚ್ ಹಾಕಿದ್ದ. ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಇದರಿಂದ ಬ್ಯಾಂಕ್‌ನ ಗ್ರಾಹಕರು ಕಂಗಾಲಾಗಿದ್ದರು. ಆರೋಪಿಗಳನ್ನು ಪತ್ತೆಹಚ್ಚುವುದೇ ಜಿಲ್ಲಾ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

ಆರೋಪಿಗಳ ಪತ್ತೆಗಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ 8 ತಂಡಗಳನ್ನ ರಚಿಸಿದ್ದರು. ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಿ, ಒಂದೇ ತಿಂಗಳಲ್ಲಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಿಜಯಕುಮಾರ್ (41), ಚಂದ್ರಶೇಖರ್ (38), ಸುನೀಲ್ (40) ಬಂಧಿತ ಆರೋಪಿಗಳು. ಜೊತೆಗೆ 10.5 ಲಕ್ಷ ರೂ. ಮೌಲ್ಯದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *