Menu

ವೀಡಿಯೊ ಪೋಸ್ಟ್‌ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್‌ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾ‌ರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್‌.ಮಧು ಕುಮಾರ್ ವೀಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಆ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್‌ ಆಗಿತ್ತು,  ಈ ಹಿನ್ನೆಲೆಯಲ್ಲಿ ಅವರನ್ನು  ಸೇವೆಯಿಂದ

ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್‌ ಹೈ ಅಲರ್ಟ್‌, ರಾತ್ರಿ 9.30ರೊಳಗೆ ಎಲ್ಲ ಬಂದ್‌

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ

ಹುಬ್ಬಳ್ಳಿಯಲ್ಲಿ ಲಾರಿ- ಕಾರು ಡಿಕ್ಕಿಯಾಗಿ ಐವರು ಬಲಿ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ (29), ಅಂಜಲಿ (26), ಸಂದೀಪ್

ಸುಹಾಸ್‌ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ: ವಿಡಿಯೋ ಚಿತ್ರೀಕರಿಸಿ ವಿಕೃತಿ

ಮೈಸೂರು: ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರುಣಾ ತಾಲ್ಲೂಕಿನ ಹೋಟೆಲ್ ವೊಂದರ ಮುಂಭಾಗ ರವಿವಾರ ತಡರಾತ್ರಿ ನಡೆದಿದೆ. ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್(32) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ರವಿವಾರ ತಡರಾತ್ರಿ 1.45 ಗಂಟೆ ಸಮಯದಲ್ಲಿ ವರುಣಾ

ಸುಹಾಸ್‌ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ

ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು

ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶನ: ಯುವಕರಿಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ, ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಾಗರಾಜ ದ್ಯಾಮಪ್ಪ

ಬೈಕ್‌ಗೆ ಲಾರಿ ಡಿಕ್ಕಿ: ಪೊಲೀಸ್ ಕಾನ್ಸ್‌ಟೇಬಲ್‌ ಸಾವು

ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕಾಶ್ (38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್‌. ಅವರು 1ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ಹಾಸನ

ಪಾಕ್‌ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರ ಬಂಧನ

ಭಾರತದ ವಿರುದ್ಧ ಉಗ್ರರ ಕಾರ್ಯಾಚರಣೆಯನ್ನು ಬೆಂಬಲಿಸುತ್ತ ಬಂದಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಕೆಲಸ ಮಾಡುತ್ತಿದ ಇಬ್ಬರನ್ನು ಪಂಜಾಬ್‌ನ ಅಮೃತಸರ ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಗ್ರಾಮೀಣ ಪೊಲೀಸರು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್

ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿ ಕನ್ನಡಾಭಿಮಾನವನ್ನು ಮೆರೆದಾಗ ಅದನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ) ಬೆಂಗಳೂರು ನಗರ ಘಟಕದ ಅಧ್ಯಕ್ಷ