Menu

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಾಲ್ವರು ಹಿಂದೂಗಳು ಸೇರಿ 8 ಆರೋಪಿಗಳು ಅರೆಸ್ಟ್

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನಾಲ್ವರು ಹಿಂದೂಗಳು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಕೊಲೆ ಪ್ರಕರಣದ ಬೆನ್ನು ಹತ್ತಿದ ಮಂಗಳೂರು ಪೊಲೀಸರು 5 ವಿಶೇಷ ತಂಡಗಳನ್ನು

ಮನೆಯಲ್ಲೇ ಸಿಕ್ಕಿಬಿದ್ದ ಪ್ರಿಯಕರ, ಪತ್ನಿ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ!

ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಸಲೀಲೆಯಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡಗಿ ಸಿಕ್ಕಿಬಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಮಾರಕಾಸ್ತ್ರದಿಂದ ಪತಿ ಕೊಂದ ಭೀಕರ ಘಟನೆ ಅಳಂದ ತಾಲೂಕಿನಲ್ಲಿ ನಡೆದಿದೆ. ಅಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಸೃಷ್ಟಿ

ಭಾರತ ತೊರೆದ ತನ್ನ ಪ್ರಜೆಗಳು ದೇಶ ಪ್ರವೇಶಿಸದಂತೆ ಅಟ್ಟಾರಿ ಗಡಿ ಬಂದ್‌ ಮಾಡಿದ ಪಾಕ್‌

ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಭಾರತವು ತನ್ನ ನೆಲದಿಂದ ಪಾಕ್‌ ಪ್ರಜೆಗಳನ್ನು ತವರಿಗೆ ವಾಪಸ್‌ ಆಗುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ ಪಾಕಿಸ್ತಾನವು ತನ್ನಲ್ಲಿಗೆ ಬರುತ್ತಿರುವ ತನ್ನ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಕೊಲೆ: ಮಂಗಳೂರಿನಲ್ಲಿ ಮೇ 6ರವರೆಗೆ ನಿಷೇಧಾಜ್ಞೆ

ಮಂಗಳೂರಿನ  ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ  ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು  ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ಸುಹಾಸ್‌ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ

ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ: ಮೂವರ ಸಾವು

ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್(28), ಶರವಣ(31) ಮತ್ತು ಸೇಂದಿಲ್(29) ಮೃತಪಟ್ಟವರು. ಅಪಘಾತ ನಡೆದ ಸ್ಥಳದಲ್ಲೇ ಒಬ್ಬ ಅಸು ನೀಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

93 ದಿನಗಳ ಜೈಲುವಾಸ ಮುಗಿಸಿ ಹೊರಬಂದ ಲಾಯರ್‌ ಜಗದೀಶ್‌

ಮಾಜಿ ಬಿಗ್​ಬಾಸ್ ಸ್ಪರ್ಧಿ, ವಕೀಲ ಜಗದೀಶ್ 93 ದಿನಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್‌ ಮಾಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. ಜಗದೀಶ್ ಅವರನ್ನು

ಕೋಲ್ಕತ್ತಾದ ಹೋಟೆಲ್‌ನಲ್ಲಿ 14 ಮಂದಿ ಬೆಂಕಿಗೆ ಬಲಿ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಬೆಂಕಿ ದುರಂತ ನಡೆದಿದ್ದು, ಕನಿಷ್ಠ 14 ಜನರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. 14 ಶವಗಳನ್ನು

ಆಚಾರ್ಯ ಕಾಲೇಜಿಗೆ ಬಾಂಬ್‌, ಪ್ರಾಂಶುಪಾಲರ ಕತ್ತರಿಸಿ ಫ್ರಿಡ್ಜ್​ನಲ್ಲಿಡುವ ಬೆದರಿಕೆ ಸಂದೇಶ

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದಾನೆ. ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಈ ಸಂದೇಶ ಗಮನಕ್ಕೆ

ಚಾಲಕನಿಗೆ ರುದ್ರಾಕ್ಷಿ ನೀಡಿ ಚಿನ್ನದುಂಗುರ ಎಗರಿಸಿ ನಕಲಿ ನಾಗಾಸಾಧು ಪರಾರಿ

ಬೆಂಗಳೂರಿನಲ್ಲಿ ನಕಲಿ ನಾಗಸಾಧುವೊಬ್ಬರು ಕಾರು ಚಾಲಕನಿಗೆ ಮಂಕುಬೂದಿ ಎರಚಿ ರುದ್ರಾಕ್ಷಿ ಕೊಟ್ಟು ಕೈಯಲ್ಲಿದ್ದ 10 ಗ್ರಾಂ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಬಹಿರಂಗಗೊಂಡಿದೆ. ವೈಯಾಲಿಕಾವಲ್ ನಿವಾಸಿ ವೆಂಕಟಕೃಷ್ಣಯ್ಯ ಎಂಬವರು ಇತ್ತೀಚೆಗೆ ಖಾಸಗಿ ಹೋಟೆಲ್ ಬಳಿ ಮಾಲೀಕರನ್ನು ಡ್ರಾಪ್ ಮಾಡಿ ರಸ್ತೆ

ಕಾರಿನೊಳಗೆ ಗುಂಡು ಹಾರಿಸಿಕೊಂಡು ಕಾರ್ಕಳದ ಉದ್ಯಮಿ ಆತ್ಮಹತ್ಯೆ

ಕಾರ್ಕಳದ ನಿಟ್ಟೆಯ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವ್ಯಕ್ತಿ. ದಿಲೀಪ್‌ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ