ಆರೋಗ್ಯ
ದಾವಣಗೆರೆ ಆಸ್ಪತ್ರೆ ಆವರಣದಲ್ಲಿ ಕುಸಿದು ಪುರಸಭೆ ಅಧ್ಯಕ್ಷ ಸಾವು
ದಾವಣಗೆರೆ ಆಸ್ಪತ್ರೆಯ ಆವರಣದಲ್ಲಿ ಹೃದಯಘಾತದಿಂದ ಕುಸಿದು ಬಿದ್ದು ಪುರಸಭೆ ಅಧ್ಯಕ್ಷ ಮೃತಪಟ್ಟಿದ್ದಾರೆ. ಹರಿಹರ ತಾಲೂಕಿನ ಮಲೆಬೆನ್ನೂರು ಪುರಸಭೆ ಅಧ್ಯಕ್ಷ ಹನುಮಂತಪ್ಪ(47) ಮೃತಪಟ್ಟವರು. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಿನ ಜಾವ ಹನುಮಂತಪ್ಪ ಆಸ್ಪತ್ರೆಗೆ ತೆರಳಿದ್ದರು. ಒಬ್ಬರೇ ಬೈಕ್ ನಲ್ಲಿ ತೆರಳಿದ್ದ ಹನುಮಂತಪ್ಪ ಆಸ್ಪತ್ರೆಯ ಬಾಗಿಲ ಮುಂದೆಯೇ ಹೃದಯಘಾತವಾಗಿ ಅಸು ನೀಗಿದ್ದಾರೆ. ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ ಅದನ್ನು ನಿರ್ಲಕ್ಷಿಸಿದ್ದ ಹನುಮಂತಪ್ಪ
ಮದುವೆಯಾಗಿ ಎರಡೇ ದಿನಕ್ಕೆ ಭದ್ರಾವತಿಯಲ್ಲಿ ವರ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮದುವೆಯಾಗಿ ಎರಡೇ ದಿನಕ್ಕೆ ವರ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹನುಮಂತಪುರ ನಿವಾಸಿ ರಮೇಶ್ (30) ಹೃದಯಾಘಾತದಿಂದ ಮೃತಪಟ್ಟವರು. ಮದುಮಗನಾಗಿ ರಮೇಶ್ ಶಿವಮೊಗ್ಗದ ಗಾಜನೂರು ಬಂಡ್ರಿಯಲ್ಲಿರುವ ವಧುವಿನ ಮನೆಗೆ ಹೋದ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತಗೊಂಡಿದೆ, ತಕ್ಷಣವೇ ಆಸ್ಪತ್ರೆಗೆ
ಕಾಂಗ್ರೆಸ್ ಮಾಜಿ ಶಾಸಕ ಆರ್‌ವಿ ದೇವರಾಜ್ ನಿಧನ
ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್. ವಿ. ದೇವರಾಜ್ ಹೃದಯಾಘಾತದಿಂದ ನಿಧನರಾದರು. ನಾಳೆ (ಡಿಸೆಂಬರ್‌೩) ಜನ್ಮದಿನ ಹಿನ್ನೆಲೆ ಸೋಮವಾರ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ
ಚಳಿಗಾಲದಲ್ಲಿ ಆರೋಗ್ಯಕ್ಕೆ ನೆಲ್ಲಿಕಾಯಿ ರಸಂ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅದ್ಭುತ ಆಹಾರಗಳಲ್ಲಿ ನೆಲ್ಲಿಕಾಯಿಯೂ ಒಂದು. ಇದು ನೆಗಡಿ, ಕೆಮ್ಮು ಮತ್ತು ಇತರ ಶೀತ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುವಲ್ಲಿ ಬಹಳಷ್ಟು ಪ್ರಯೋಜನಕಾರಿ. ನೆಲ್ಲಿಕಾಯಿ ಒಳಗೊಂಡಿರುವ ವಿಟಮಿನ್ ಸಿ ಅಂಶವು ಚಳಿಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಲು ನೆರವಾಗುತ್ತದೆ. ಚಳಿಗಾಲದಲ್ಲಿ
ಬಿಹಾರದ 7 ಜಿಲ್ಲೆಗಳ ತಾಯಿ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ
ಪಾಟ್ನಾದ ಮಹಾವೀರ ಕ್ಯಾನ್ಸರ್ ಸಂಸ್ಥಾನ, ನವದೆಹಲಿಯ ಏಮ್ಸ್ ಮತ್ತು ಜೀವರಸಾಯನಶಾಸ್ತ್ರ ವಿಭಾಗದ ಸಂಶೋಧಕರ ಒಕ್ಕೂಟ ನಡೆಸಿರುವ ಅಧ್ಯಯನವೊಂದರಲ್ಲಿ ಬಿಹಾರದ ಏಳು ಜಿಲ್ಲೆಗಳ ತಾಯಂದಿರ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ ಪತ್ತೆಯಾಗಿದೆ. ಬಿಹಾರದಲ್ಲಿ ನಡೆದ ಮಹತ್ವದ ವೈದ್ಯಕೀಯ-ವೈಜ್ಞಾನಿಕ ಅಧ್ಯಯನ ಇದಾಗಿದ್ದು, ಆಘಾತಕಾರಿ ಮಾಹಿತಿಯೊಂದನ್ನು ಹೊರ
ಬಾಲಕಿ ಹೊಟ್ಟೆಯಲ್ಲಿತ್ತು ಮೂರು ಕೆಜಿ ಕೂದಲು
ಬೆಂಗಳೂರಿನಲ್ಲಿ ವೈದ್ಯರೇ ಅಚ್ಚರಿಪಡುವಂತೆ ಎಂಟು ವರ್ಷದ ಬಾಲಕಿಯ ಹೊಟ್ಟೆಯೊಳಗೆ ಮೂರು ಕೆಜಿ ಕೂದಲು ಪತ್ತೆಯಾಗಿದೆ. ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗಿದ್ದ ಮೂರು ಕೆಜಿ ತೂಕದ ಕೂದಲು ಗಂಟನ್ನು ಹೊರ ತೆಗೆದಿದ್ದಾರೆ.
ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು
ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ.
ಕಲಬುರಗಿಯಲ್ಲಿ ನಾಲ್ಕು ದಿನ ತೀವ್ರ ಶೀತ ಗಾಳಿ ಎಚ್ಚರಿಕೆ
ಕಲಬುರಗಿಯಲ್ಲಿ ಇಂದಿನಿಂದ ನಾಲ್ಕು ದಿನ ತೀವ್ರ ಶೀತದ ಗಾಳಿ ಬೀಸಲಿದೆ. ಸಾಮಾನ್ಯಕ್ಕಿಂತ 04- 06 ಡಿಗ್ರಿ ಕಡಿಮೆ ತಾಪಮಾನ ದಾಖಲಾಗುವುದು ಎಂದು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಮಾಹಿತಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ನಿಗಾ ವಹಿಸಿ ಈ ಪರಿಸ್ಥಿತಿಯಲ್ಲಿ ಜನರು ಅನಗತ್ಯವಾಗಿ ಹೊರಗೆ
ಮೆದುಳು ತಿನ್ನುವ ಸೋಂಕು ಹೆಚ್ಚಳ: ಶಬರಿಮಲೆ ಯಾತ್ರಿಗಳು ಮೂಗಿಗೆ ನೀರು ತಾಗದಂತೆ ಎಚ್ಚರ ವಹಿಸಿ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಶಬರಿಮಲೆಯಾತ್ರೆ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಕದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇರಳ ಸರ್ಕಾರವು ಬಿಡುಗಡೆ ಮಾಡಿರುವ ಆರೋಗ್ಯ ಮಾರ್ಗದರ್ಶಿಯಲ್ಲಿ ಎಚ್ಚರಿಕೆ ನೀಡಿದೆ. ಯಾತ್ರಿಕರು ನದಿಯಲ್ಲಿ ಸ್ನಾನ




