ಬೆಂಗಳೂರು
ಶೌಚಾಲಯದಲ್ಲಿ 30 ಮಹಿಳೆಯರ ವೀಡಿಯೊ ಮಾಡಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್
ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಬಟ್ಟೆ ಬದಲಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆಹಿಡಿದಿದ್ದ ಕಂಪನಿಯ ಹೀಲೀಕ್ಸ್ ಡಿಪಾರ್ಟ್‌ಮೆಂಟ್‌ನ ಸೀನಿಯರ್ ಅಸೋಸಿಯೇಟ್ ಕನ್ಸಲ್ಟೆಂಟ್‌ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಬಂಧಿತ. ಬೆಂಗಳೂರಿನಲ್ಲಿರುವ ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವೀಡಿಯೊ ರೆಕಾರ್ಡ್ ಮಾಡುತ್ತಿರುವಾಗಲೇ ಸ್ವಪ್ನಿಲ್ ಸಿಕ್ಕಿಬಿದ್ದಿದ್ದ. ಶೌಚಾಲಯಕ್ಕೆ ತೆರಳಿದ್ದ ಮಹಿಳಾ ಉದ್ಯೋಗಿಗಳು ಬಟ್ಟೆ ಬದಲಿಸುವ ದೃಶ್ಯವನ್ನು ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರೆಕಾರ್ಡ್
ಬೆಂಗಳೂರು ಉತ್ತರ ಜಿಲ್ಲೆಯಾಗಿ ಬೆಂಗಳೂರು ಗ್ರಾಮಾಂತರ ಪುರ್ನಾಮಕರಣ: ಸಂಪುಟ ಸಭೆ ಅಸ್ತು
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರ ಮಾಡಿದ್ದ ರಾಜ್ಯ ಸರ್ಕಾರ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಎಂದು ಪುನರ್ನಾಮರಣ ಮಾಡಲು ತೀರ್ಮಾನಿಸಿದೆ. ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ
ಸರ್ಕಾರಕ್ಕೆ 150 ಕೋಟಿ ವಂಚನೆ ಆರೋಪ: ಕೆಎಎಸ್ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದಡಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. ಪ್ರಾದೇಶಿಕ ಆಯುಕ್ತರ
ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಸುರಂಗ ಮಾರ್ಗಕ್ಕೆ ಸಿದ್ಧತೆ
ಬೆಂಗಳೂರು ನಗರದಲ್ಲಿ ಸುರಂಗ ಮಾರ್ಗ ಸಿದ್ಧಪಡಿಸಲು ಸರ್ಕಾರ ಮುಂದಾಗಿದೆ. ನಗರದ ಟ್ರಾಫಿಕ್ ಝೋನ್ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ಗೆ ಪರ್ಯಾಯ ಮಾರ್ಗ ಸಿದ್ಧಪಡಿಸಲು ಸರ್ಕಾರದ ಸಿದ್ಧತೆ ನಡೆಸಿದೆ. 18,000 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲು ಸರ್ಕಾರ ಕ್ರಮ ವಹಿಸಲಿದ್ದು,
ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್: ಶಂಕಿತ ಉಗ್ರನ ಬಂಧನ
2013 ರಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಅಬೂಬಕರ್ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆಯು ಮೂವತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಬೂಬಕರ್ ಮತ್ತು ಸಹಚರ ಮಹಮ್ಮದ್
ಮಾಧ್ಯಮಗಳಿಂದ ಅಧಿಕಾರಸ್ಥರ ಓಲೈಕೆ ಸಲ್ಲ, ಊಹಾ ಪತ್ರಿಕೋದ್ಯಮದಿಂದ ಸಮಾಜಕ್ಕೆ ಅಪಾಯ: ಸಿಎಂ
ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ, ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ
Accident Deaths: ದೊಡ್ಡಬಳ್ಳಾಪುರದಲ್ಲಿ ಓವರ್ ಟೇಕ್ ಮಾಡಲು ಹೋಗಿ ಕಾರಿನಲ್ಲಿದ್ದ ನಾಲ್ವರ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಲಾರಿ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆಂದು ಕಾರಿನಲ್ಲಿ 8 ಮಂದಿ ತೆರಳುತ್ತಿದ್ದಾಗ ನಡೆದ ಈ ಅಪಘಾತದಲ್ಲಿ ನಾಲ್ವರು
ನೈಸ್ ರಸ್ತೆ ಟೋಲ್ ದರ ಮತ್ತೆ ಏರಿಕೆ: ಸಾರ್ವಜನಿಕರ ಆಕ್ರೋಶ
ಲಕ್ಷಾಂತರ ವಾಹನಗಳು ಸಂಚರಿಸುವ ಬೆಂಗಳೂರಿನ ನೈಸ್ ರಸ್ತೆ ಟೋಲ್ ದರ ಮತ್ತೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಜುಲೈ 1) ಅನ್ವಯ ಆಗಲಿದೆ. ಸರಾಸರಿ ಶೇ15 ರ ವರೆಗೆ ಟೋಲ್ ಶುಲ್ಕ ಹೆಚ್ಚಳ ಆಗುತ್ತಿದೆ. ಕರ್ನಾಟಕ ಸರ್ಕಾರದ ಟೋಲ್ ರಿಯಾಯಿತಿ ಒಪ್ಪಂದ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ವೈದ್ಯರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕರ್ತವ್ಯದಲ್ಲಿದ್ದ ವೈದ್ಯರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್
ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್
ಬೆಂಗಳೂರು: ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು. ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆಯಲ್ಲಿ 3.17