ಹಾಸನ
ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು
ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ ಶಾಂತಿಗ್ರಾಮದ ಬಳಿ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ. ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ತಡೆದು ರೌಡಿಯ ಹುಚ್ಚಾಟ
ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದ ರೌಡಿ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಸುಕಿನ ಜಾವ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ರೌಡಿ
ಹೊಳೆನರಸೀಪುರದಲ್ಲಿ ರೈಲಿಂದ ನದಿಗೆ ಬಿದ್ದ ವಿದ್ಯಾರ್ಥಿ
ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೊಬ್ಬ ನದಿಗೆ ಬಿದ್ದಿದ್ದಾನೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮುಜಾಮಿಲ್ ನದಿಗೆ ಬಿದ್ದ ವಿದ್ಯಾರ್ಥಿ. ವಿದ್ಯಾಥಿ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್
ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ
ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು.
ಹಾಸನದಲ್ಲಿ ವ್ಯಕ್ತಿಯ ಸಾಯಿಸಿ ಶವ ಮುಚ್ಚಿಟ್ಟ ಕಾಡಾನೆ
ಹಾಸನದ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ಕಾಡಾನೆಯೊಂದು ವೃದ್ಧರೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದಲ್ಲದೆ ಶವದ ಮೇಲೆ ಕಾಫಿ ಗಿಡಗಳನ್ನು ಮುಚ್ಚಿಟ್ಟು ಹೋಗಿರುವುದು ಪತ್ತೆಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಗ್ಗೆ ಗ್ರಾಮದಿಂದ ಅಡಿಬೈಲು
ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ
ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ
ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ
ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು
ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!
ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ