ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶ ಸೆ.19ಕ್ಕೆ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ನಿಖರವಾದ ಸಂಖ್ಯೆ ತಿಳಿಯುವುದು ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸಿ ಒಂದೇ ಎಂಬ ಭಾವನೆ ಮೂಡಿಸಲು ಇದೇ ಸೆ.19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ಆಯೋಜಿಸಲಾಗಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವು ಸೆ.19ರಂದು ಮಧ್ಯಾಹ್ನ 3ಕ್ಕೆ ನಡೆಯಲಿದೆ, ಸಮಾವೇಶದಲ್ಲಿ ಒಂದು ಸಾವಿರಕ್ಕೂ ಹೆಚ್ಚು ನಾಡಿನ ಹರ ಗುರು ಚರಮೂರ್ತಿಗಳು ಆಗಮಿಸಿ ಆಶೀರ್ವದಿಸಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ಮಹಿಳಾ ವಿಭಾಗದ
ಯು ಟ್ಯೂಬ್ ಚಾನಲ್ಗಳಿಗೆ ಪರವಾನಗಿ ನಿಗದಿ ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು
ಹುಬ್ಬಳ್ಳಿಯಲ್ಲಿ ಲಾರಿ- ಕಾರು ಡಿಕ್ಕಿಯಾಗಿ ಐವರು ಬಲಿ
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ (29), ಅಂಜಲಿ (26), ಸಂದೀಪ್
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ
ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್ಎಸ್ಎಸ್ ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು
ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಫಾರಸು
ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ
ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ
ಮುಳಗುಂದದಲ್ಲಿ ತಂದೆಯಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಪ
ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ
ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ
ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ
ಶಾಸಕ ಯತ್ನಾಳ್ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ
ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ
ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.