Saturday, February 01, 2025
Menu

ಕೊಡಗು ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ

ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.

ತನ್ನದೇ ಗನ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ

ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂದು ಗುರುತಿಸಲಾಗಿದೆ. ಬಂದೂಕು ಕೆಳಕ್ಕೆ ಬಿದ್ದು ಗುಂಡು ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂಗಪ್ಪ ಅವರು ಚೇರಂಬಾಣೆ ಪಟ್ಟಣದಲ್ಲಿ