ಮಂಗಳೂರು
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ಐಟಿಗೆ ಹೈಕೋರ್ಟ್ ನೋಟಿಸ್
ಧರ್ಮಸ್ಥಳ ಪರಿಸರದಲ್ಲಿ ಶವಗಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸಲು ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ ನೋಟಿಸ್ ಜಾರಿ ಮಾಡಿದೆ. ಸ್ಥಳೀಯರಾದ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬ ಇಬ್ಬರು ಸಾಕ್ಷಿದಾರರು, ನೇತ್ರಾವತಿ ಕಾಡಿನಲ್ಲಿ ಚಿನ್ನಯ್ಯ ಶವವನ್ನು ಹೂಳುವಾಗ ನೋಡಿದ್ದೇವೆ ಎಂದು ಎಸ್ಐಟಿಗೆ
ಮಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ವಾಹನ: ಲಾರಿ ಹರಿದು ಮಹಿಳೆ ಸಾವು
ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಮಹಿಳಾ ಸವಾರರೊಬ್ಬರ ಮೇಲೆ ಕ್ಯಾಂಟರ್ ಲಾರಿ ಹರಿದು ಮೃತಪಟ್ಟಿದ್ದಾರೆ. ಉಡುಪಿಯ ಪರ್ಕಳದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಹಾಜರಾಗಲು
ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್, ಪ್ರಕರಣಕ್ಕೆ
ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ಪರ ವಕೀಲರ ವಿರುದ್ಧ ಎಸ್ಐಟಿಗೆ ದೂರು
ಧರ್ಮಸ್ಥಳ ಅಸಹಜ ಸಾವುಗಳ ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಜೊತೆ ಇದ್ದ ವಕೀಲರಿಗೆ ಎಸ್ಐಟಿ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿನ್ನಯ್ಯ ಪರ ವಕೀಲ ಕೆ.ವಿ.ಧನಂಜಯ್ ಹಾಗೂ ತಂಡದ ವಿರುದ್ಧ ತನಿಖೆ ನಡೆಸುವಂತೆ ಕೋರಿ ಗಾಮಸ್ಥರು ದೂರು ನೀಡಿದ್ದಾರೆ. ವಕೀಲ
ಎಸ್ಐಟಿಯಿಂದ ಸೌಜನ್ಯ ಪ್ರಕರಣದ ತನಿಖೆ? ಉದಯ್ ಜೈನ್ಗೆ ಬುಲಾವ್
ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಗೆ ಸಂಬಂಧಿಸಿದಂತೆ ಆಕೆಯ ಕುಟುಂಬಸ್ಥರು ಯಾರ ವಿರುದ್ಧ ಆರೋಪ ಮಾಡಿದ್ದಾರೋ ಆ ವ್ಯಕ್ತಿಗಳಾದ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್, ಉದಯ್ ಜೈನ್ಗೆ ಎಸ್ಐಟಿ ಬುಲಾವ್ ನೀಡಿದೆ. ಪ್ರಕರಣದ ಆರೋಪಿಯಾಗಿ ಹೆಸರು ಕೇಳಿ ಬಂದಿದ್ದ ಉದಯ್ ಜೈನ್ ಎಸ್ಐಟಿ ಸೂಚನೆಯಂತೆ
ಸೌಜನ್ಯ ತಾಯಿ ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯ ಬಿಜೆಪಿಗೆ ಇದೆಯೇ ?
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ,
ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್ ಫಂಡ್ ಆರೋಪ: ತನಿಖೆಗೆ ಮುಂದಾದ ಇಡಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ
ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ
ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್ನ ಐವರು ಪ್ರಾಣ ಕಳೆದುಕೊಂಡಿದ್ದಾರೆ.