ಮೈಸೂರು
ಮೈಸೂರಿನ ಹಲವೆಡೆ ಐಟಿ ಅಧಿಕಾರಿಗಳಿಂದ ರೇಡ್
ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಆಸ್ತಿಗಳ ಮತ್ತು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್ ಬಳಿ ಬರುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯ ಮೊಬೈಲ್ ಕಿತ್ತುಕೊಂಡಿರುವ
ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ
ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ
ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ
ಮುಡಾ ಮಾಜಿ ಅಧ್ಯಕ್ಷ ನಟೇಶ್ ವಿರುದ್ಧ ಇಡಿ ಶೋಧ ರದ್ದುಗೊಳಿಸಿದ ಹೈಕೋರ್ಟ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಸಮನ್ಸ್ ರದ್ದು ವಿಚಾರವಾಗಿ ಮಹತ್ವದ ಸೂಚನೆ ನೀಡಿರುವ ಕರ್ನಾಟಕ ಹೈಕೋರ್ಟ್, ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆಯಡಿ ಇಡಿ ಶೋಧನೆಯನ್ನು ರದ್ದುಪಡಿಸಿದೆ.
ಸಿಎಂ ತವರಲ್ಲೂ ಮೈಕ್ರೋ ಫೈನಾನ್ಸ್ ಸಾಲಬಾಧೆಗೆ ಇಬ್ಬರ ಬಲಿ
ಮೈಸೂರು: ರಾಜ್ಯದ ಹಲವೆಡೆ ಸದ್ದು ಮಾಡುತ್ತಿರುವ ಮೈಕ್ರೋಫೈನಾನ್ಸ್ ಹಾವಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೂ ಭೇದಿಸುತ್ತಿದ್ದು, ಸಾಲಬಾಧೆಗೆ ಇಬ್ಬರು ಸಾವನ್ನಪ್ಪಿ ಒಬ್ಬ ರೈತ ವಿಡಿಯೋ ಮೂಲಕ ತನ್ನ ಅಳಲು ಹೇಳಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ
ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು
ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ
ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್
ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಕಿರುಕುಳ ಶಂಕೆ
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.
ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನ ಬಂಧನ
ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದ ಸಮೀಪ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ ಬಿನ್ ಶಿವಪ್ರಸಾದ್(28) ಹಾಗೂ ಶಿವಪ್ರಸಾದ್ ಬಿನ್ ಷಡಕ್ಷರಿ(48) ಖೋಟಾ ನೋಟು ಪ್ರಿಂಟ್ ಮಾಡಿ ಪೋಲೀಸರ ಬಲೆಗೆ ಬಿದ್ದ
ನಿನ್ನ ಯೋಗ್ಯತೆ ನನಗೆ ಗೊತ್ತಿಲ್ವಾ? ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು
ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ