Menu

ಎಲ್ಲದರ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು. ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ

ದರ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಪ್ರತಿಭಟನೆ

ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕೈ ನಾಯಕರು ಕುಟುಕಿದ್ದಾರೆ. ಇಂದಿನ

ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ

ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್ 

“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025

ದ್ರಾವಿಡ ಪಾರ್ಟಿಗಳ ಮುಂದೆ ಮಂಡಿಯೂರಿದ ಬಿಜೆಪಿ

ವಕ್ಫ್ ವಿಧೇಯಕದ ಸಂಸತ್ ಅನುಮೋದನೆ ಬಳಿಕ, ಹಂಡ್ರೆಡ್ ಪರ್ಸೆಂಟ್ ಹಿಂದೂ ಮತಗಳು ಕನ್ಸಾಲಿಡೇಟ್ ಆಯಿತೆಂದು ಬಗೆದರೆ ಅದು ಬಿಜೆಪಿ ಭ್ರಮೆಯಷ್ಟೆ. ಜಾತ್ಯತೀತ ಪಾರ್ಟಿಗಳ ಜೊತೆ  ರಾಜಿ ಮಾಡಿಕೊಳ್ಳದಿದ್ದಲ್ಲಿ  ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯುವುದೂ ಬಲು ಕಷ್ಟ. -ಪಿ.ರಾಜೇಂದ್ರ, ಲೇಖಕರು ದಕ್ಷಿಣ

ಅತಿ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು: ಸಚಿವ ಹೆಚ್‌ಡಿಕೆ  ಪ್ರಶ್ನೆ

ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, 

ಕೇಂದ್ರ ಸಚಿವ ಸಂಪುಟ ಪುನರ್‌ ರಚನೆ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್‌ ರಚನೆ ಈ ವಾರಾಂತ್ಯ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿ ಏ.19 ಕ್ಕೆ ನಿಗದಿಯಾಗಿದ್ದ ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ

ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ

ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್

“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ

ಸೋನಿಯಾ, ರಾಹುಲ್ ವಿರುದ್ಧ  ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ