ರಾಜ್ಯ
1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು ಏಪ್ರಿಲ್ 18 : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದರು. ಗುರುವಾರ ರಾಜ್ಯ ಗುತ್ತಿಗೆದಾರರ ಸಂಘದ
ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ
ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಅಮಾನತಿಗೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,
ಬೆಂಗಳೂರಿನಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಲಾರಿ
ಬೆಂಗಳೂರು: ಚಲಿಸುತ್ತಿರುವ ಲಾರಿಯ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮದ್ಯೆ ದಗದಗನೇ ಹೊತ್ತಿ ಉರಿದ ಘಟನೆ ಪೀಣ್ಯದಾಸರಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಎಂಟನೇ ಮೈಲಿ ಬಳಿ ರಾಷ್ಟೀಯ ಹೆದ್ದಾರಿ ಪ್ಲೈಓವರ್ ನಲ್ಲಿ ತುಮಕೂರು ಕಡೆಯಿಂದ
ಜಾತಿಗಣತಿಗೆ ಸಚಿವರಿಂದಲೇ ವಿರೋಧ: ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲು ವಿಫಲ
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಜಾತಿಗಣತಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವಿಷಯ ಮತ್ತೆ ಚರ್ಚೆ ಬರಲಿದೆ, ಹಲವು ಸಚಿವರು
ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಲಾರಿ ಮಾಲೀಕರ ಮುಷ್ಕರ ವಾಪಸ್
ಬೆಂಗಳೂರು: ಸರ್ಕಾರ ಹಾಗೂ ಲಾರಿ ಮಾಲೀಕರ ನಡುವಿನ ಸಂಧಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರದ ಬಗ್ಗೆ ಗುರುವಾರ
ಎಲ್ಲದರ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್
ಲಾರಿ ಮುಷ್ಕರ ಮೂರನೇ ದಿನಕ್ಕೆ, ಸರಕು ಸಾಗಣೆಯಲ್ಲಿ ವ್ಯತ್ಯಯ
ಡಿಸೇಲ್ ಬೆಲೆ ಹೆಚ್ಚಳ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಲಾರಿ ಮಾಲೀಕರು ನಡೆಸುತ್ತಿರುವ ಲಾರಿ ಮುಷ್ಕರವು ಮೂರನೇ ದಿನಕ್ಕೆ ಕಾಲಿರಿಸಿದೆ. ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು
ದರ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕೈ ನಾಯಕರು ಕುಟುಕಿದ್ದಾರೆ. ಇಂದಿನ
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26