Wednesday, August 12, 2026
Menu

ಐಎಎಸ್‌ಗಳ ವರ್ಗಾವಣೆ, ಎಚ್‌ ಪ್ರಸನ್ನಗೆ ಕೆಪಿಎಸ್ಸಿ ಪರೀಕ್ಷೆ ಹೊಣೆ

ಮೂವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹೆಚ್ ಅವರಿಗೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ, ಯಾದಗಿರಿ ಜಿ.ಪಂ. ಸಿಇಒ ಲವಿಶ್ ಓರ್ಡಿಯಾ ಅವರಿಗೆ ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆ ಹಾಗೂ ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್ ಅವರಿಗೆ ಆರ್‌ಡಿಪಿಆರ್ ಇ-ಆಡಳಿತ ನಿರ್ದೇಶಕರ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಕಾವೇರಿ ಹರಿಸಿ: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಗಳ ವಿಚಾರಣೆ ಆ. 17ಕ್ಕೆ

ಕಾವೇರಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ, ಡಿಎಂಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್‌ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ರೈತರ ಪರವಾಗಿ ಹಾಜರಾದ ವಕೀಲ ಪಿ. ವಿಲ್ಸನ್, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ

ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರವು ಒಂದು ವರ್ಷ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಆದೇಶ ಪ್ರಕಟಿಸಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ

ವಿಧಾನಸಭೆ, ಪರಿಷತ್‌ ಸ್ಪೀಕರ್‌ ಸ್ಥಾನಗಳಿಗೆ ಆಗಸ್ಟ್‌ 14ರಂದು ಚುನಾವಣೆ

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಮತ್ತು ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಆಗಸ್ಟ್‌ ೧೪ರಂದು ಶುಕ್ರವಾರ ಚುನಾವಣೆ ನಡೆಯಲಿದೆ. ಎರಡೂ ಸ್ಥಾನಗಳಿಗೆ ನಾಮಪತ್ರ ಪತ್ರ ಸಲ್ಲಿಸಲು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವಿದೆ. ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ನಿಗದಿತ ರೀತಿಯಲ್ಲಿ ಸೂಚನಾ ಪತ್ರದ ಮೂಲಕ ಸಂಬಂಧಪಟ್ಟ

ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್‌

ಕಾವೇರಿ ನೀರು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.  ಕಾವೇರಿ, ಮೇಕೆದಾಟು, ಮಹಾದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಬಂದ್‌ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌

ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿಕೆ ಶಿವಕುಮಾರ್ 

ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಅಂಬೇಡ್ಕರ್ ಭವನದಲ್ಲಿ  ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು

CWRC ಆದೇಶ: ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿ ತೀರ್ಮಾನವೆಂದ ಸಿಎಂ 

ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ 

ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ಸಿಎಂಗೆ ಬಿಡದಿ ರೈತರ ಮನವಿ

ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ

ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌ ಅಶೋಕ

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು

ಭ್ರಷ್ಟಾಚಾರ ವಿಚಾರದಲ್ಲಿ ರಾಜಿ ಇಲ್ಲ, ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ: ಸಿಎಂ ಕಿಡಿ

ಭ್ರಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ. ಪ್ರತಿ ಫಲಾನುಭವಿ ಮಾಹಿತಿ ಇಟ್ಟುಕೊಳ್ಳಬೇಕು. ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂದು ನೋಡಬೇಕು. ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅಂತಹವರನ್ನು ಬಡಿದು ಹಾಕುತ್ತೇನೆ. ನಕಲಿ