Menu

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ

ಇ-ಸೇವೆಯಲ್ಲಿ ಕರ್ನಾಟಕ ನಂ.1: ವರದಿ

ದೇಶಾದ್ಯಂತ ಇ-ಸೇವೆಗಳ ವಿತರಣೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನ (NeSDA) ವರದಿ ಹೇಳಿದೆ. ದೇಶಾದ್ಯಂತ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಇ-ಸೇವಾ ವಿತರಣೆಯ ಸ್ಥಿತಿಗತಿಯ ಕುರಿತು ಸುದೀರ್ಘ ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿದ್ದು, ಕರ್ನಾಟಕ ಇ-ಸೇವೆಗಳ

ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ

ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್‌ ?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ  ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು

ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್

ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ.

ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ

ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು.

ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ

ಬೆಳಗಾವಿಯಲ್ಲಿ ನಡೆದ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿಯ  ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್  ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ

ಡಾ.ಕುಮಾರ್‌ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ

ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ೨೦೨೪-೨೫ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂಬ ಪ್ರಶಸ್ತಿ ಪ್ರಕಟಿಸಿದೆ. ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನ ಬಂಧನ

ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದ ಸಮೀಪ  ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ ಬಿನ್ ಶಿವಪ್ರಸಾದ್(28) ಹಾಗೂ ಶಿವಪ್ರಸಾದ್ ಬಿನ್ ಷಡಕ್ಷರಿ(48)  ಖೋಟಾ ನೋಟು ಪ್ರಿಂಟ್ ಮಾಡಿ ಪೋಲೀಸರ ಬಲೆಗೆ ಬಿದ್ದ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ `ಲಕ್ಕುಂಡಿ’!

ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.