Saturday, February 01, 2025
Menu

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನಿಲ್‌ ಕುಮಾರ್‌ ರಾಜೀನಾಮೆ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿ, ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ ಈ ನಡೆ ಅಚ್ಚರಿ ಮೂಡಿಸಿದೆ. ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಸುನಿಲ್ ಕುಮಾರ್​, ವಿಜಯೇಂದ್ರ ತಂಡದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆ ಸುನಿಲ್​ ಕುಮಾರ್ಗೆ

ವಿಜಯೇಂದ್ರ ನಿಮ್ಮಪ್ಪನ ದುಡ್ಡಲ್ಲಿ ಮೆರೆಯುತ್ತಿದ್ದಿಯ: ರಮೇಶ್ ಜಾರಕಿಹೊಳಿ ತಿರುಗೇಟು

ನಿಮ್ಮಪ್ಪನನ್ನು ಸಿಎಂ ಮಾಡಲು ನಾನು ಶಾಸಕ ಸ್ಥಾನ ತ್ಯಾಗ ಮಾಡಿದೆ. ನೀನು ನಿಮ್ಮಪ್ಪನ ದುಡ್ಡಲ್ಲಿ ಓಡಾಡಿಕೊಂಡು ಮಜ ಮಾಡ್ತಾ ಇದ್ದಿಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ರೆ

ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಇವಿ ವಾಹನ ಮಾರಾಟ ಹೆಚ್ಚಳ

ನವದೆಹಲಿ: ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ

ಜಾತ್ರಾ ಮಹೋತ್ಸವದ ಸಮಾರೋಪದಲ್ಲಿ ಭಾವುಕರಾಗಿ‌ ಕಣ್ಣೀರು ಹಾಕಿದ ಗವಿಶ್ರೀಗಳು

ಕೊಪ್ಪಳ:  ಗವಿಮಠದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಶ್ರೀಮಠದ ಗವಿಶ್ರೀಗಳು ಭಾವುಕರಾಗಿ‌ ಕಣ್ಣೀರು ಹಾಕಿದ ಘಟನೆ ಶುಕ್ರವಾರ ರಾತ್ರಿ ಕೈಲಾಸಮಂಟಪದ ವೇದಿಕೆಯಲ್ಲಿ ನಡೆಯಿತು. ಕೊಪ್ಪಳದ ನೂತನ ರೈಲು ನಿಲ್ದಾಣಕ್ಕೆ ಹೆಸರಿಡುವ ವಿಚಾರದಲ್ಲಿ ಗವಿಸಿದ್ಧೇಶ್ವರ ಹೆಸರಿನ ಜೊತೆ ಬೇರೆ

ವೈಜಾಗ್ ಸ್ಟೀಲ್ ಕಾರ್ಖಾನೆಗೆ 11,440 ಕೋಟಿ ರೂ. ಪುನಚ್ಚೆತನ ಪ್ಯಾಕೇಜ್; ಕೇಂದ್ರ ಅನುಮೋದನೆ: ಎಚ್.ಡಿ. ಕುಮಾರಸ್ವಾಮಿ

ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು 11,440 ಕೋಟಿ ರೂ. ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಕೆ ಶಿವಕುಮಾರ್

ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ

ನೆಲಮಂಗಲ, ದೇವನಹಳ್ಳಿಯಲ್ಲಿ ಶೀಘ್ರ ರೈಲು ಟರ್ಮಿನಲ್‌

ಬೆಂಗಳೂರು ನಗರದ ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕಾರಣ ನಗರ ಹೊರವಲಯದಲ್ಲಿ ಎರಡು ರೈಲ್ವೆ ಟರ್ಮಿನಲ್​ಗಳನ್ನು ತೆರೆಯಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ

ಮುಡಾ ಅಕ್ರಮದಲ್ಲಿ “ಕೋಕನಟ್‌” ಕೋಡ್‌ವರ್ಡ್‌ : ಸಿಕ್ಕಿಬಿದ್ದ ಬಿಲ್ಡರ್‌

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ  ಮುಟ್ಟುಗೋಲು ಹಾಕಿದ ಬೆನ್ನಲ್ಲೇ “ಕೋಕನಟ್‌” ಕೋಡ್‌ವರ್ಡ್‌ ಬಳಸಿ ಅಕ್ರಮ ವ್ಯವಹಾರಗಳನ್ನು ನಡೆಸುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಇಡಿ ಅಧಿಕಾರಿಗಳು ಬಿಲ್ಡರ್‌ ಜಯರಾಮ್ ಮನೆ ಮೇಲೆ ದಾಳಿ ನಡೆಸಿದ್ದರು. ಈತ

ನಾಳೆ ಎರಡು ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ವ್ಯತ್ಯಯ

ಹಳಿ ನಿರ್ವಹಣಾ ಕಾಮಗಾರಿ ಕಾರಣಕ್ಕೆ ಜ.19 ರಂದು ಭಾನುವಾರ ನೇರಳೆ ಮಾರ್ಗದಲ್ಲಿನ ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿನ