Thursday, September 17, 2026
Menu

ಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಇಂದು ರಾತ್ರಿ

ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅ.೧೭ ಗುರುವಾರ  ರಾತ್ರಿ ೭.೫೦ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಸಂಭವಿಸಲಿದೆ. ಸೆ.೨೭ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ.

ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ-೨೦೨೬ ಹಾಗೂ ಜಾತ್ರಾ ಮಹೋತ್ಸವದ ಶುಭ ಮುಹೂರ್ತಗಳ ಪಟ್ಟಿಯನ್ನು ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧಿಕೃತವಾಗಿ ಪ್ರಕಟಿಸಿದ್ದು, ಸೆ.೨೭ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ.

ಸೆ.೨೭ರಂದು ಬೆಳಗ್ಗೆ ೮.೪೫ಕ್ಕೆ ಭಾನುವಾರದಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಕಾರ್ಯಕ್ರಮ ಆರಂಭವಾಗಲಿದೆ. ಅ.೫ರಂದು ಬೆಳಗ್ಗೆ ೧೦.೩೫ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ ನೆರವೇರಲಿದ್ದು, ಅ.೧೫ರಂದು ಮಧ್ಯಾಹ್ನ ೧೨.೩೫ಕ್ಕೆ ಸಲ್ಲುವ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇಡಲಾಗುವುದು. ಅದೇ ದಿನ ಸಂಜೆ ೬:೦೩ಕ್ಕೆ ಸಲ್ಲುವ ಮೀನ ಲಗ್ನದಲ್ಲಿ. ಕಾಣಿಕೆ ಡಬ್ಬಿ ಇಡಲಾಗುವುದು.

ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮಹೋತ್ಸವದ ಅಂಗವಾಗಿ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಜರುಗುವ ಪೂಜಾ ಕಾರ್ಯಕ್ರಮಗಳಲ್ಲಿ ದೇಶಾದ್ಯಂತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಮುಹೂರ್ತಗಳಲ್ಲಿ ನಡೆಸಲು ದೇವಾಲಯದ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

Related Posts

Leave a Reply

Your email address will not be published. Required fields are marked *