Wednesday, August 26, 2026
Menu

ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂಗೆ ಅರ್ಜಿ ಸಲ್ಲಿಸಲು ಕರ್ನಾಟಕ ನಿರ್ಧಾರ

ತಮಿಳುನಾಡಿಗೆ ಪ್ರತಿದಿನ ಒಂಬತ್ತು ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಎಇರುವ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ.

ಮುಂದಿನ ವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಮಿಳುನಾಡಿಗೆ ಬಿಡಬೇಕಾಗಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎನ್‌. ಚಲುವರಾಯ ಸ್ವಾಮಿ ಹೇಳಿದ್ದಾರೆ. ಸದ್ಯಕ್ಕೆ ಪ್ರಾಧಿಖಾರದ ಆದೇಶದಂತೆ ನೀರು ಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಆರ್‌ಎಸ್‌ ಒಳಹರಿವು 14,000 ಕ್ಯೂಸೆಕ್ ಇದ್ದು, ಜಲಾಶಯಗಳಿಗೆ ಹರಿದುಬರುವ ನೀರನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ, ಉತ್ತಮ ಮಳೆಯಾಗಿದ್ದು, ಹಾರಂಗಿ ಜಲಾಶಯ ಭರ್ತಿಯಾಗಿರುವುದರಿಂದ ಕೆಆರ್‌ಎಸ್‌ಗೆ ಹೆಚ್ಚಿನ ಪ್ರಮಾಣದ ಒಳ ಹರಿವು ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮಳೆ ಕೊರತೆ ನೀಗಿಸುವ ಉದ್ದೇಶದಿಂದ ಮೋಡ ಬಿತ್ತನೆ ಕಾರ್ಯಾಚರಣೆ ಇನ್ನೆರಡು ದಿನಗಳಲ್ಲಿ ಆರಂಭವಾಗುವ ಸಾಧ್ಯತೆ ಇದೆ. 60 ದಿನ ಕಾರ್ಯಾಚರಣೆ ನಡೆಸಲು ಯೋಜಿಸಲಾಗಿದೆ. ಇದಕ್ಕೆ 27 ಕೋಟಿ ರೂ. ವೆಚ್ಚವಾಗಲಿದೆ. ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಕಾರ್ಯಾಚರಣೆ ನಡೆಸಲಾಗುವುದು. ಮೋಡ ಬಿತ್ತನೆ ಶೇಕಡ 30ರಷ್ಟು ಯಶಸ್ಸು ಕಂಡರೆ ಕಾರ್ಯಾಚರಣೆ ಸಾರ್ಥಕವಾಗಲಿದೆ ಎಂದು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *