Thursday, January 30, 2025
Menu

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ  ಹಿರಿಯೂರಿನಲ್ಲಿ  ವಾಣಿವಿಲಾಸ ಸಾಗರಕ್ಕೆ ಬಾಗಿನ ಸಮರ್ಪಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಮನವಿ ಮಾಡಿದ್ದೆವು. ಮಾಜಿ ಸಂಸದರಾಗಿದ್ದ ನಾರಾಯಣಸ್ವಾಮಿ ಅವರು ಪತ್ರವನ್ನು ಬರೆಸಿಕೊಂಡು ಹೋದರು. ಕೇಂದ್ರ ಸರ್ಕಾರ ಬೇರೆ ರೀತಿ ಹಣ ನೀಡುವುದಾಗಿ ಅವರು ಹೇಳಿದರು. ಅದಕ್ಕೂ ಒಪ್ಪಿಕೊಂಡೆವು. ಆದರೂ ಅನುದಾನ ಬಂದಿಲ್ಲ. ಇಡೀ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಈಗಲೂ ನಾವು ಒತ್ತಡ ಹಾಕುತ್ತಿದ್ದೇವೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ನಮಗೆ ಹೆಚ್ಚು ಅನುದಾನ ಸಿಗುತ್ತಿತ್ತು ಎಂದು ಹೇಳಿದರು.

ರಾಜ್ಯದ ಬಗ್ಗೆ ಆಸಕ್ತಿ, ಬದ್ಧತೆ ಇದ್ದರೆ ಇಲ್ಲಿನ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡಲು ಒತ್ತಾಯ ಮಾಡಬೇಕು. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಪ್ರಧಾನಿ ಮೋದಿ ಅವರು ಕೊಟ್ಟ ಮಾತಿನಂತೆ ಅನುದಾನ ನೀಡಿ ಮಾತು ಉಳಿಸಿಕೊಳ್ಳಲಿ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ತುಂಬಿಸಲು ಜಿಲ್ಲೆಯಾದ್ಯಂತ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

 

 

 

Related Posts

Leave a Reply

Your email address will not be published. Required fields are marked *