Menu

ಪೆಟ್ರೋಲ್, ಡೀಸೆಲ್ ಮೇಲೆ ಲೀಟರ್ 2 ರೂ. ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ!

diesel

ಯುಗಾದಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಅಬಕಾರಿ ಸುಂಕ ವಿಧಿಸಿದೆ.

ಕೇಂದ್ರ ಸರ್ಕಾರ ತೈಲ ಕಂಪನಿಗಳ ಮೇಲೆ ಲೀಟರ್ ಗೆ 2 ರೂ. ದರ ಏರಿಸಿದೆ. ಆದರೆ ಸುಂಕ ಏರಿಕೆಯಿಂದ ಗ್ರಾಹಕರ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ದರ ಏರಿಕೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಬೀಳುವುದಿಲ್ಲ ಎಂದು ಹೇಳಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ 4 ವರ್ಷಗಳಲ್ಲೇ ಕನಿಷ್ಠ ಮೊತ್ತಕ್ಕೆ ಕಚ್ಛಾ ತೈಲ ಬೆಲೆ ಇಳಿದಿದೆ. ಇದರ ಲಾಭ ಪಡೆಯಲು ಕೇಂದ್ರ ಸರ್ಕಾರ ಲೀಟರ್ ಗೆ 2 ರೂ. ಸುಂಕ ಹೆಚ್ಚಿಸಿದೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಸುಂಕ ವಿಧಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸುಂಕ ವಿಧಿಸಿದೆ. ಇದರಿಂದ ಈಗಾಗಲೇ ಗಗನಮುಖಿ ಆಗಿರುವ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ.

Related Posts

Leave a Reply

Your email address will not be published. Required fields are marked *