Menu

ದೇಶದ ಅಣೆಕಟ್ಟೆಗಳ ಹೂಳು ತೆರವಿಗೆ ಕೇಂದ್ರದಿಂದ ಶೀಘ್ರ ಯೋಜನೆ: ಜಲಶಕ್ತಿ ಸಚಿವ ಸಿಆರ್ ಪಾಟೀಲ್ 

ದೇಶದಾದ್ಯಂತ ಇರುವ ಬಹುತೇಕ ಅಣೆಕಟ್ಟೆಗಳಲ್ಲಿ ಶೇಕಡಾ 15 ಕ್ಕಿಂತಲೂ ಹೆಚ್ಚು ಹೂಳು ತುಂಬಿಕೊಂಡಿದ್ದು, ಇದರಿಂದ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ ಗಣನೀಯವಾಗಿ ಕುಸಿದಿದೆ. ಈ ಸಮಸ್ಯೆಯನ್ನು ಮನಗಂಡು  ಹೂಳು ತೆಗೆಯುವ (ಡಿ-ಸಿಲ್ಟಿಂಗ್) ಬೃಹತ್ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಹೇಳಿದರು.

​ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಕೊಪ್ಪಳದ ಮುನಿರಾಬಾದ್‌ನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಮಾತನಾಡಿದರು.

​ತುಂಗಭದ್ರಾ ಜಲಾಶಯದಲ್ಲೂ ಶೇ. 15 ಕ್ಕಿಂತ ಹೆಚ್ಚು ಹೂಳು ತುಂಬಿಕೊಂಡಿರುವುದನ್ನು ಪ್ರಸ್ತಾಪಿಸಿದ ಸಚಿವ ಸಿಆರ್ ಪಾಟೀಲ್ , ಜಲಶಕ್ತಿ ಸಚಿವಾಲಯವು ಹೂಳು ತೆಗೆಯುವ ವಿಶೇಷ ಯೋಜನೆಯನ್ನು ರೂಪಿಸುತ್ತಿದೆ  ಯೋಜನೆಯ ತಾಂತ್ರಿಕ ಸಹಯೋಗವನ್ನು ಕೇಂದ್ರ ಸರ್ಕಾರ ನೀಡಲಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಆಯಾ ರಾಜ್ಯ ಸರ್ಕಾರಗಳು ಹೊರಬೇಕಾಗುತ್ತದೆ.  ಯೋಜನೆ ಯಶಸ್ವಿಯಾದರೆ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯವನ್ನು ಶೇಕಡಾ 25 ರಿಂದ 30 ರಷ್ಟು ಹೆಚ್ಚಿಸಬಹುದಾಗಿದೆ ಎಂದರು.

​ಹಿಂದೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳ ನಡುವೆ ನೀರು ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಇಂದು ಮೂರೂ ರಾಜ್ಯಗಳ ಮುಖ್ಯಮಂತ್ರಿಗಳು ಒಂದೇ ವೇದಿಕೆಗೆ ಬಂದು ಒಗ್ಗಟ್ಟು ಪ್ರದರ್ಶಿಸಿರುವುದನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು. ಯಾವುದೇ ಆಕ್ಷೇಪಣೆಗಳಿಲ್ಲದೆ, ಪರಸ್ಪರ ಸಹಕಾರ ಹಾಗೂ ಆರ್ಥಿಕ ನೆರವು ನೀಡಿದ್ದರಿಂದಲೇ ತುಂಗಭದ್ರಾ ಜಲಾಶಯಕ್ಕೆ ಕೆಲವೇ ದಿನಗಳಲ್ಲಿ ನೂತನ ಗೇಟುಗಳನ್ನು ಅಳವಡಿಸಲು ಸಾಧ್ಯವಾಯಿತು ಎಂದು ಹೇಳಿದರು.

ರಿನ ಯೋಜನೆಗಳ ಮೂಲಕವೂ ಇಡೀ ದೇಶವನ್ನು ಬೆಸೆಯಲಾಗುತ್ತಿದೆ, ರೈತರಿಗೆ ಹೆಚ್ಚಿನ ನೀರು ಲಭ್ಯವಾದರೆ ಅವರು ವರ್ಷಕ್ಕೆ ಒಂದರ ಬದಲು ಎರಡು ಬೆಳೆಗಳನ್ನು ತೆಗೆಯಲು ಸಾಧ್ಯವಾಗುತ್ತದೆ ಮತ್ತು ಇದರಿಂದ ಅವರ ಆದಾಯವೂ ದ್ವಿಗುಣಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.  ‘ಹರ್ ಘರ್ ಜಲ್’ ಯೋಜನೆಯು ಹಳ್ಳಿಗಳಲ್ಲಿ ಸರಿಯಾಗಿ ಅನುಷ್ಠಾನಗೊಳ್ಳದಿದ್ದರೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Related Posts

Leave a Reply

Your email address will not be published. Required fields are marked *