Saturday, December 27, 2025
Menu

ಚಾಮರಾಜನಗರ ಅರಣ್ಯ ಸಿಬ್ಬಂದಿ ಹುಲಿ ದಾಳಿಗೆ ಬಲಿ!

chamaraja nagar tiger

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ.

ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

56 ವರ್ಷದ ಸಣ್ಣ ಹೈದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ದಿನ ನಿತ್ಯ ಈ ಮರಳಹಳ್ಳ ಕ್ಯಾಂಪ್ ಸುತ್ತಮುತ್ತ ಬೀಟ್ ಹಾಕುವುದು, ಯಾರಾದರೂ ಕಾಡುಗಳ್ಳರು ಸಂಚರಿಸಿದ್ದಾರೆ, ಬೇಟೆ ನಡೆಸಿದ್ದಾರಾ ಎಂದು ಪತ್ತೆ ಹಚ್ಚುವುದರ ಜೊತೆ ಪ್ರಾಣಿಗಳ ಓಡಾಟದ ಮೇಲು ಕಣ್ಣಿಟ್ಟಿರ ಬೇಕು.

ಬೀಟ್​​ಗೆ ಹೋಗುವ ಹಾಗೆ ತನ್ನ ಕ್ಯಾಂಪ್​ನ 4 ಮಂದಿ ಜೊತೆ ಶನಿವಾರ ಮಧ್ಯಾಹ್ನ ಸಣ್ಣಹೈದ ಬೀಟ್ ಗೆ ಹೋಗಿದ್ದರು. ಹುಲ್ಲು ಬೀಜಗಳನ್ನ ಆಯುವ ಕೆಲಸ ಮಾಡ್ತಾಯಿದ್ರು. ಈ ವೇಳೆ ಹಠಾತ್ತನೆ ಸಣ್ಣ ಹೈದನ ಮೇಲೆ ದಾಳಿ ನಡೆಸಿದೆ ತಕ್ಷಣವೇ ಅಲರ್ಟ್ ಅದ ಜೊತೆಗಿದ್ದ ಸಿಬ್ಬಂದಿ ಕೂಗಿಕೊಂಡು ಪರಿಣಾಮ ಹುಲಿ ಪರಾರಿಯಾಗಿದೆ, ಆದರೆ ಸಣ್ಣ ಹೈದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಸ್ಥಳಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಎಫ್ ಹಾಗೂ ಮುಖ್ಯಸ್ಥ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಒಟ್ಟಿನಲ್ಲಿ ಹುಲಿ ದಾಳಿಗಳು ಗಡಿ ನಾಡು ಚಾಮರಾಜನಗರದಲ್ಲಿ ಮುಂದುವರೆದಿದ್ದು, ಜನ ಅಷ್ಟೇ ಅಲ್ಲ ಅರಣ್ಯ ಸಿಬ್ಬಂದಿ ಕೂಡ ಆತಂಕ ಪಡುವಂತಾಗಿದೆ.

ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಕೇವಲ ಗುಂಡ್ಲುಪೇಟೆ ಭಾಗ ಅಷ್ಟೇ ಅಲ್ಲ ಚಾಮರಾಜನಗರ ಹನೂರು ತಾಲೂಕುಗಳಲ್ಲಿಯೂ ವ್ಯಾಘ್ರನ ಉಪಟಳ ಮಿತಿಮೀರಿದೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಬೃಹತ್ ವ್ಯಾಘ್ರವೊಂದು ಮೈಸೂರು ಕೇಜ್​ನಲ್ಲಿ ಲಾಕ್ ಆಗಿತ್ತು.

ಇನ್ನೊಂದೆಡೆ ಚಾಮರಾಜನಗರ ತಾಲೂಕಿನ ನಂಜೆದೇವನಪುರದಲ್ಲಿ 5 ಹುಲಿಗಳು ಜಮೀನಿನಲ್ಲಿ ಓಡಾಟ ನಡೆಸಿ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​ನ ಸಿಬ್ಬಂದಿ ಅದೆಷ್ಟೂ ತಡಕಾಡಿದರು ಒಂದು ವ್ಯಾಘ್ರ ಸಹ ಇನ್ನು ಸೆರೆ ಹಿಡಿಯುವುದಕ್ಕೆ ಆಗುತ್ತಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಮತ್ತೆ ಗಡಿ ನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವುದು ಆತಂಕ ಹೆಚ್ಚಿಸಿದೆ.

Related Posts

Leave a Reply

Your email address will not be published. Required fields are marked *