ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.
ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಆತ್ಮವಿಶ್ವಾಸದಲ್ಲಿ ಭಾರತ ತಂಡ ಇದ್ದರೆ, ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಿವೀಸ್ ಪಡೆ ಇದೆ.
ಸಂಘಟಿತ ಪ್ರದರ್ಶನದಿಂದ ಸೋಲರಿಯದ ತಂಡವಾಗಿ ಮುನ್ನುಗ್ಗುತ್ತಿರುವ ಭಾರತ ತಂಡ ೨೫ ವರ್ಷಗಳ ನಂತರ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಸ್ಪಿನ್ನರ್ ಗಳು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರೆ, ಬ್ಯಾಟ್ಸ್ ಮನ್ ಗಳು ಹೊಸ ಪಿಚ್ ನಲ್ಲಿ ಜವಾಬ್ದಾರಿಯುತ ಪ್ರದರ್ಶನ ನೀಡುತ್ತಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡುವ ನಿರೀಕ್ಷೆ ಇದ್ದು, ಮೊಹಮದ್ ಶಮಿ ಬದಲು ಅರ್ಷದೀಪ್ ಸಿಂಗ್ ಆಡಬಹುದು. ಉಳಿದಂತೆ ಸ್ಪಿನ್ನರ್ ಗಳು ತಂಡದಲ್ಲಿ ಉಳಿದುಕೊಳ್ಳಲಿದ್ದಾರೆ. ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮಂಡಿ ನೋವಿಗೆ ಒಳಗಾಗಿದ್ದು ತಂಡದಲ್ಲಿ ಸ್ವಲ್ಪ ಮಟ್ಟಿಗೆ ಆತಂಕ ಉಂಟು ಮಾಡಿದೆ. ೬ನೇ ಕ್ರಮಾಂಕದಲ್ಲಿ ಮಿಂಚುತ್ತಿರುವ ಕೆಎಲ್ ರಾಹುಲ್ ೫ನೇ ಕ್ರಮಾಂಕದಲ್ಲಿ ಆಡಿಸಲಾಗುವುದೇ ಎಂಬ ಅನುಮಾನ ಕಾಡುತ್ತಿದೆ.
ಮತ್ತೊಂದೆಡೆ ನ್ಯೂಜಿಲೆಂಡ್ ಕೂಡ ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದು, ಭಾರತ ವಿರುದ್ಧ ಮಾತ್ರ ಏಕಮಾತ್ರ ಸೋಲುಂಡಿದೆ. ತಂಡದಲ್ಲಿ ಕೇನ್ ವಿಲಿಯಮ್ಸ್, ಡುಕೆಟ್ ಸೇರಿದಂತೆ ಬ್ಯಾಟ್ಸ್ ಮನ್ ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು, ೬ ಎಡಗೈ ಬ್ಯಾಟ್ಸ್ ಮನ್ ಗಳು ಇರುವುದು ತಂಡದ ಬಲವಾಗಿದೆ.