Tuesday, November 17, 2026
Menu

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚೆಕ್-ಇನ್: ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಾಣೆಯೆಂದು ಹುಬ್ಬಳ್ಳಿ ಮಹಿಳೆ ದೂರು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದಿಂದ ದುಬೈಗೆ ತೆರಳುತ್ತಿದ್ದ ಹುಬ್ಬಳ್ಳಿಯ ಮಹಿಳೆಯೊಬ್ಬರ ಲಗೇಜ್ ಬ್ಯಾಗ್‌ನಲ್ಲಿದ್ದ ಚಿನ್ನ ಮತ್ತು ವಜ್ರಾಭರಣಗಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಏರ್ಪೋರ್ಟ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹುಬ್ಬಳ್ಳಿ ಮೂಲದ ಈ ಮಹಿಳೆ ಕಳೆದ ನವೆಂಬರ್ ತಿಂಗಳಲ್ಲಿ ದುಬೈ ಮೂಲಕ ಅಮೆರಿಕಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಇತ್ತೀಚೆಗೆ ರಾಜ್ಯಕ್ಕೆ ವಾಪಸ್ ಆಗಿದ್ದು, ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದಾರೆ.  ಚೆಕ್-ಇನ್ ವೇಳೆ ಲಗೇಜ್ ಬ್ಯಾಗ್‌ನೊಳಗೆ ಚಿನ್ನಾಭರಣ ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿಗೆ ತೋರಿಸಿ, ನಿಯಮಾನುಸಾರ ಬ್ಯಾಗ್‌ಗೆ ಟ್ಯಾಗ್ ಮಾಡಿಸಿದ್ದರು. ಆ ಬ್ಯಾಗ್ ಅನ್ನು ವಿಮಾನದ ಲಗೇಜ್ ವಿಭಾಗಕ್ಕೆ ಕಳುಹಿಸಲಾಗಿತ್ತು. ದುಬೈ ತಲುಪಿದ ಬಳಿಕ ಬ್ಯಾಗ್ ಪರಿಶೀಲನೆ ನಡೆಸಿ ದಾಗ ಅದರೊಳಗೆ ಇರಿಸಿದ್ದ ಚಿನ್ನ ಮತ್ತು ವಜ್ರಾಭರಣಗಳು ಕಾಣೆಯಾಗಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.

790 ಗ್ರಾಂ ಚಿನ್ನಾಭರಣ ಹಾಗೂ 8 ಲಕ್ಷ ರೂಪಾಯಿ ಮೌಲ್ಯದ ವಜ್ರಾಭರಣ ನಾಪತ್ತೆಯಾಗಿವೆ. ಚೆಕ್-ಇನ್ ನಂತರ ಲಗೇಜ್ ವಿಮಾನಕ್ಕೆ ಸೇರಿಸುವ ಮಧ್ಯೆ ಕಳ್ಳತನ ನಡೆದಿರುವ ಸಾಧ್ಯತೆ ಹೆಚ್ಚಿರುವುದರಿಂದ, ವಿಮಾನ ನಿಲ್ದಾಣದ ಸಿಬ್ಬಂದಿಯಿಂದಲೇ ಚಿನ್ನಾಭರಣ ಕಳ್ಳತನವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Related Posts

Leave a Reply

Your email address will not be published. Required fields are marked *