ಬೆಂಗಳೂರು : ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಂಬನಿ ಮಿಡಿದಿದ್ದಾರೆ.
ಸತತ ಮೂರು ಬಾರಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿ, ವಿಧಾನ ಸಭೆ ಉಪಾಧ್ಯಕ್ಷರಾಗಿ ಅವರ ಕಾರ್ಯ ನಿರ್ವಹಣೆ ಅನುಕರಣೀಯ ವಾದುದು. ಅವರ ಜನಪರ ಕಾಳಜಿ ಸ್ಮರಣೀಯ ವಾದುದು. ಅವರ ನಿಧನದಿಂದ ಒಬ್ಬ ಉತ್ತಮ ರಾಜಕಾರಣಿ ಹಾಗೂ ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ಈ ದುಃಖ ಮರೆಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವು ದಾಗಿ ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.