93 ವರ್ಷಗಳ ಇತಿಹಾಸದಲ್ಲಿ ಕೃಷ್ಣರಾಜ ಸಾಗರ ಜಲಾಶಯವು ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ ಹಾಗೂ ಇತರ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಲಾಶಯದಲ್ಲಿ ನೀರು 124.80 ಅಡಿಗಳ ಗರಿಷ್ಠ ಮಟ್ಟ ತಲುಪಿ, 49.452 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯದಲ್ಲಿ 28,938 ಕ್ಯೂಸೆಕ್ ಒಳಹರಿವು ಮತ್ತು 28,681 ಕ್ಯೂಸೆಕ್ ಹೊರಹರಿವು ದಾಖಲಾಗಿದೆ. ಕೆಆರ್‌ಎಸ್ ಜಲಾಶಯ ಹೀಗೆ ಭರ್ತಿಯಾಗಿರುವುದು ರೈತರು ಮತ್ತು ಸಾರ್ವಜನಿಕರಿಗೆ ಸಂತಸ ತಂದಿದೆ.