ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ.
ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ ಗಣೇಶ್ ಹತ್ಯೆಯಾಗಿತ್ತು, ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ, ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್(40)ಅವರನ್ನು ಕೊಲೆ ಮಾಡಲಾಗಿತ್ತು. ಕಲ್ಮರಡಿ ಮಠದ ಈ ಕೊಲೆ ನಡೆದಿತ್ತು. ಕಾರಿನಲ್ಲಿ ಗಣೇಶ್ ತೆರಳುತ್ತಿದ್ದಾಗ ಬೈಕ್ನಲ್ಲಿ ಅಡ್ಡಗಟ್ಟಿದ್ದ ಹಂತಕರ ತಂಡ ಮಚ್ಚಿನಿಂದ ದಾಳಿ ನಡೆಸಿ ಮಚ್ಚನ್ನು ಅಲ್ಲೇ ಬಿಸಾಡಿ ಹೋಗಿತ್ತು.
ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಧಿಸಿದಂತೆ ಈವರೆಗೆ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ಸಂಜಯ್, ನಾಗಭೂಷಣ್, ಮಿಥುನ್ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ಖಂಡಿಸಿ, ಅವರ ಸಾವಿನಿಂದ ಕುಟುಂಬದ ಸದಸ್ಯರಷ್ಟೇ ನಾವು ದುಖಿಃತರಾಗಿ ದ್ದೇವೆ. ಕೊಲೆಗೈದವರನ್ನು ಕಾನೂನಿನ ಪ್ರಕಾರ ಕಠಿಣ ಒಳಪಡಿಸುವ ಮೂಲಕ ನ್ಯಾಯ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಹೇಳಿದ್ದರು.


