Menu

ಹಾವೇರಿಯಲ್ಲಿ ಟ್ರ್ಯಾಕ್ಟರ್‌ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು

ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ.

ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತಕ್ಕೆ ಅರಣ್ಯ ವಾಚರ್ಸ್‌ ಬಲಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಮೃತಪಟ್ಟಿದ್ದಾರೆ.

ಕಮಲಾಪುರದ ಕೃಷ್ಣ (26), ವೆಂಕಟಾಪುರದ ಹನುಮಂತಪ್ಪ (50) ಮೃತಪಟ್ಟವರು. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ವಾಚರ್ಸ್ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅಪಘಾತ ನಡೆದಿದೆ.
ಅಪಘಾತದ ಬಳಿಕ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *