Menu

ಆಟವಾಡುತ್ತಿದ್ದ ಮಗು ಸಂಪ್‌ಗೆ ಬಿದ್ದು ಸಾವು

ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿದೆ. ಬ್ಯಾಡರಹಳ್ಳಿಯ ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್‌ ಮೃತಪಟ್ಟ ಮಗು.

ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪ್‌ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್‌ಗೆ ಬೈಕ್‌ ಡಿಕ್ಕಿ: ವಿದ್ಯಾರ್ಥಿನಿ ಸಾವು

ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಟಿಪ್ಪರ್​​ಗೆ ದ್ವಿಚಕ್ರ ವಾಹನ​ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ಕೃತಿಕಾ(21) ಸ್ಥಳದಲ್ಲೇ ಮೃತಪಟ್ಟಿದ್ದು, ಹಂಸ ಎಂಬಾಕೆಯ ಸ್ಥಿತಿ ಗಂಭೀರವಾಗಿದೆ.

ಕಾಲೇಜು ಮುಗಿಸಿ ಕೃತಿಕಾ ಮತ್ತು ಹಂಸ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ದ್ವಿಚಕ್ರವಾಹನದಲ್ಲಿದ್ದ ಇಬ್ಬರೂ ಬಿದ್ದಿದ್ದು, ಅವರ ಮೇಲೆ ಟಿಪ್ಪರ್​ ಚಲಿಸಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *