Thursday, November 13, 2025
Menu

ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಮಲಯಾಳಂ ಸಿನಿಮಾರಂಗದ ಖ್ಯಾತ ನಟ ಮೋಹನ್‌ಲಾಲ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಮೋಹನ್‌ಲಾಲ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸೆಪ್ಟೆಂಬರ್ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೋಹನ್‌ಲಾಲ್ ಮಲಯಾಳಂ ಸಿನಿಮಾದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಖ್ಯಾತರಾದವರು. 1978ರಲ್ಲಿ

ಜೈಲಿನಲ್ಲಿ ಸೌಲಭ್ಯ ಕೋರಿ ದರ್ಶನ್‌ ಮತ್ತೊಮ್ಮೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.25ಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಎಂಎಂ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ. ನ್ಯಾಯಾಲಯದ ನಿರ್ದೇಶನ ನೀಡಿದ್ದರೂ ತನಗೆ ಜೈಲಿನಲ್ಲಿ

ಕೊತ್ತಲವಾಡಿ ಚಿತ್ರ ನಿರ್ಮಾಪಕಿ ಪುಷ್ಪ ಸಂಭಾವನೆ ನೀಡದೆ ವಂಚನೆ: ನಟ ಮಹೇಶ್‌ ಆರೋಪ

ನಟ ಯಶ್ ಅವರ ತಾಯಿ ಹಾಗೂ ಕೊತ್ತಲವಾಡಿ ಚಿತ್ರ ನಿರ್ಮಾಪಕಿ ಪುಷ್ಪ ಸಂಭಾವನೆ ನೀಡದೆ ವಂಚಿಸಿರುವುದಾಗಿ ಚಿತ್ರದ ಸಹ ನಟ ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ. ಮಹೇಶ್ ಈ ಕುರಿತು ವೀಡಿಯೊ ಬಿಡುಗಡೆಗೊಳಿಸಿದ್ದು, ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗಿದೆ. ಕೊತ್ತಲವಾಡಿ ಚಿತ್ರದಲ್ಲಿ

ಕೋರ್ಟ್‌ ಆದೇಶಿಸಿದ್ದರೂ ಹಾಸಿಗೆ, ದಿಂಬು ಕೊಡುತ್ತಿಲ್ಲ: ದರ್ಶನ್‌ ವಕೀಲರಿಂದ ಮತ್ತೆ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್‌ ಇತ್ತೀಚೆಗೆ ಆದೇಶಿಸಿದ್ದರೂ ಅಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ಅವರ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ತುಂಬಾ ಚಳಿಯಿದೆ,

ವರದಕ್ಷಿಣೆ ಕಿರುಕುಳ ದೂರು: ಎಸ್‌. ನಾರಾಯಣ್‌ ಕುಟುಂಬಕ್ಕೆ ಪೊಲೀಸ್‌ ನೋಟಿಸ್‌

ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದಡಿ ಸೊಸೆ ಪ್ರಕರಣ ದಾಖಲಿಸಿರುವ ಹಿನ್ನೆಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು

ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ: ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ ಚಿತ್ರರಂಗದ ಇಬ್ಬರು ಮೇರು ಕಲಾವಿದರಿಗೆ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್. ​ನಾರಾಯಣ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ದೇಶಕ ಎಸ್‌. ನಾರಾಯಣ್‌ ಮತ್ತು ಅವರ ಮಗ ಪವನ್‌ ವಿರುದ್ಧ ಸೊಸೆ ಪವಿತ್ರಾ ದೂರು ದಾಖಲಿಸಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯಿಸುತ್ತಿರುವದಾಗಿ ಪವಿತ್ರಾ ಅವರು ಮಾವ ಮತ್ತು ಗಂಡನ ವಿರುದ್ಧ ಜ್ಞಾನಭಾರತಿ ಪೊಲೀಸ್

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಸದ್ಯಕ್ಕೆ ರಿಲೀಫ್‌

ನಿರ್ಮಾಪಕ ರಾಘವೇಂದ್ರ ಹೆಗಡೆ ಮುಂಬೈನಲ್ಲಿ ದಾಖಲಿಸಿದ್ದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿರುವ ಆದೇಶದಿಂದ ನಟ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಧ್ರುವ ಸರ್ಜಾ ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಪಡೆದು ಸಿನಿಮಾ ಮಾಡಲು

ದರ್ಶನ್‌ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್‌ ಅಸ್ತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್​ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು

ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ  ನಟ ದರ್ಶನ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು