Thursday, February 12, 2026
Menu

ಕನ್ನಡ ನಟ ಹರೀಶ್ ರೈ ಇನ್ನಿಲ್ಲ

ಕಳೆದ ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹಾಗೂ ಪೋಷಕ ನಟ ಹರೀಶ್ ರೈ (55) ನಿಧನರಾದರು. ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 11 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2 ಚಿತ್ರಗಳು ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದ್ದರು. ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಹರೀಶ್‌ ರೈ ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತು ಸಿಗದಂತಾಗಿದ್ದರು.

ನಟಿಗೆ ಅಶ್ಲೀಲ ಫೋಟೊ, ಸಂದೇಶ ಕಳುಹಿಸಿದ ಕಾಮುಕ ಅರೆಸ್ಟ್

ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟಿಸಿರುವ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗಗಳ ಫೋಟೊ ಕಳುಹಿಸಿದ್ದ ಕಾಮುಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಟೆಂಪ್ಲೆಟನ್ ಅಂಡ್ ಪಾರ್ಟನ್ ಕಂಪನಿಯಲ್ಲಿ ಡೆಲಿವರಿ ಮ್ಯಾನೇಜರ್

ರೇಣುಕಾಸ್ವಾಮಿ ಕೊಲೆ: ಸುಪ್ರೀಂ ಆದೇಶ ಮರುಪರಿಶೀಲನೆಗೆ ಪವಿತ್ರಾ ಗೌಡ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ

ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ

ಮುಂಬೈ ಆಸ್ಪತ್ರೆಗೆ ನಟ ಧರ್ಮೆಂದ್ರ ದಾಖಲು

ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ಮುಂಬೈನ ಖಾಸಗಿ ಆಸ್ಪತ್ರೆಗೆ ಶುಕ್ರವಾದ ದಾಖಲಿಸಲಾಗಿದೆ. ಡಿಸೆಂಬರ್ 8ಕ್ಕೆ 90ನೇ ವಸಂತಕ್ಕೆ ಕಾಲಿಡಲಿರುವ ಧರ್ಮೆಂದ್ರ ಅವರನ್ನು ಸಹಜ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, 4-5 ದಿನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಏಪ್ರಿಲ್

ಬಿಗ್‌ ಬಾಸ್‌: ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಪೊಲೀಸ್‌ ನೋಟಿಸ್‌

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋದಲ್ಲಿ ಸ್ಪರ್ಧಿ ಅಶ್ವಿನಿ ಗೌಡ ಮತ್ತೊಬ್ಬರು ಸ್ಪರ್ಧಿ ರಕ್ಷಿತಾ ಅವರನ್ನು ಕುರಿತು ‘ಎಸ್ ಕ್ಯಾಟಗರಿ’ ಎಂಬ ಪದವನ್ನು ಬಳಸಿದ್ದಕ್ಕಾಗಿ ಅಶ್ವಿನಿ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದಾರೆ.‌ ಅಶ್ವಿನಿ ಈ ಪದ ಬಳಸಿರುವುದನ್ನು ಖಂಡಿಸಿ ವಕೀಲರೊಬ್ಬರು ಬಿಡದಿ

ಜೈಲಿನಲ್ಲಿ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ಇಲ್ಲವೆಂದ ಕೋರ್ಟ್‌

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ನಿರಾಕರಿಸಿದೆ. ಜೈಲಿನ ಕೈಪಿಡಿ ಪ್ರಕಾರ ಸವಲತ್ತುಗಳನ್ನು ಮಾತ್ರ ನೀಡಲಾಗುತ್ತದೆ. ತಿಂಗಳಿಗೆ ಒಂದು ಬಾರಿ ಚಾದರ್ ಮತ್ತು

ಪುನೀತ್ ರಾಜಕುಮಾರ್, ಅಶ್ವಿನಿಯಿಂದ ರಾಜಕಾರಣದ ಆಹ್ವಾನ ನಿರಾಕರಣೆ: ಡಿಕೆ ಶಿವಕುಮಾರ್‌

“ರಾಜಕಾರಣಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸೆಳೆಯಲು ನಾನು ಅನೇಕ ಬಾರಿ ಪ್ರಯುತ್ನ ಪಟ್ಟೆ, ಚಾಕಲೇಟ್ ಕೊಟ್ಟೆ. ಆದರೆ ಅವರು ಬರಲಿಲ್ಲ. ಸಹೋದರಿ ಅಶ್ವಿನಿ ಅವರನ್ನು ಸಹ ಆಹ್ವಾನಿಸಿದೆ. ಅವರು ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು, ರಾಜಕಾರಣಕ್ಕೆ ಬರಲಿಲ್ಲ” ಎಂದು

ಬಾಲಿವುಡ್ ಹಿರಿಯ ನಟ ಸತೀಶ್ ಶಾ ವಿಧಿವಶ

ಬಾಲಿವುಡ್ ಸಿನಿಮಾ ಹಾಗೂ ಕಿರುತೆರೆಗಳಲ್ಲಿ ಜನಪ್ರಿಯರಾಗಿದ್ದ ಹಿರಿಯ ನಟ ಸತೀಶ್ ಶಾ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಾಸ್ಯ ಪ್ರಧಾನ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಸತೀಶ್ ಶಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಬೆಳಿಗ್ಗೆ ಅವರ ಆರೋಗ್ಯ ದಿಢೀರನೆ ಹದಗೆಟ್ಟಿದ್ದು, ಕೂಡಲೇ