Menu

ಸರ್ಕಾರಕ್ಕೆ ನೆಟ್‌ ಬೋಲ್ಟ್‌ ಟೈಟ್‌ ಮಾಡ್ಬೇಕೆಂದು ಹರಿಹಾಯ್ದ ಆರ್‌. ಅಶೋಕ್‌

ಬಿಜೆಪಿ ಸರ್ಕಾರ ಚಲನಚಿತ್ರೋತ್ಸವ ಮಾಡಿದಾಗಲೂ ಕಲಾವಿದರು ಬಂದಿರಲಿಲ್ಲ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಲಾವಿದರಿಗೆ ಬೆದರಿಕೆ ಹಾಕಿದ್ದಾರೆ. ಚಿತ್ರೋದ್ಯಮವನ್ನು ಅಭಿವೃದ್ಧಿ ಮಾಡಲು ಪ್ರತಿ ಸರ್ಕಾರ ಅನುದಾನ ನೀಡುತ್ತದೆ. ಅನೇಕ ಕಲಾವಿದರು ಈಗ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಕಲಾವಿದರಿಗೆ ಮೊದಲು ಗೌರವ ನೀಡಬೇಕು. ಮೇಕೆದಾಟು ಪಾದಯಾತ್ರೆಯನ್ನು ರಾಜಕೀಯ ಉದ್ದೇಶ ಇಟ್ಟುಕೊಂಡು ಮಾಡಲಾಗಿತ್ತು. ಅಂತಹ ಪ್ರತಿಭಟನೆಗೆ ಕಲಾವಿದರು ಯಾಕೆ ಬರುತ್ತಾರೆ,  ನೆಟ್‌ ಬೋಲ್ಟ್‌ ಅನ್ನು ಸರ್ಕಾರಕ್ಕೆ ಮೊದಲು ಟೈಟ್‌ ಮಾಡಬೇಕಿದೆ ಎಂದು 

ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ದರ ನಿಗದಿಗೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ 

ಬೆಂಗಳೂರು: ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್

ಅರಣ್ಯದಲ್ಲಿ ಅಕ್ರಮ ಚಿತ್ರೀಕರಣ: ತರುಣ್ ಸುಧೀರ್ ಚಿತ್ರ ತಂಡದ ಉಪಕರಣ ಸೀಜ್!

ಅನುಮತಿ ನೀಡದೇ ಇದ್ದರೂ ವನ್ಯಜೀವಿ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಕ್ಕಾಗಿ ನಿರ್ದೇಶಕ ತರುಣ್ ಸುಧೀರ್ ನಿರ್ಮಾಣದ ಚಿತ್ರದ ಉಪಕರಣಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ. ತುಮಕೂರಿನ ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ತರುಣ್ ಸುಧೀರ್ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಸಹಾಯಕ

14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ  ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ,  2.67 ಕೋಟಿ ಹಣವನ್ನು ಡಿಆರ್‌ಐ 

ಹಳ್ಳಿ ಭಾಷೆಯಲ್ಲಿ ಹೇಳಿದ್ದೇನೆ, ಹೊಸ ಭಾಷೆ ಇದ್ದರೆ ಕಲಿಸಿಕೊಡಿ: ಚಿತ್ರರಂಗದ ಗಣ್ಯರ ಅಸಮಾಧಾನಕ್ಕೆ ಡಿಕೆಶಿ ತಿರುಗೇಟು

“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು

14.8 ಕೆಜಿ ಚಿನ್ನ ಕಳ್ಳಸಾಗಾಣೆ: ಬೆಂಗಳೂರಿನಲ್ಲಿ ಮಾಣಿಕ್ಯ ಚಿತ್ರದ ನಟಿ ಅರೆಸ್ಟ್!

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ಮಾಣಿಕ್ಯ ಚಿತ್ರದ ನಟಿ ಹಾಗೂ ಐಪಿಎಸ್ ಅಧಿಕಾರಿ ಪುತ್ರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ಅವರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.

ಆಡ್ರಿಯನ್, ಮಿಕ್ಕಿ ಮ್ಯಾಡಿಸನ್ ಶ್ರೇಷ್ಠ ನಟ, ನಟಿ ಆಸ್ಕರ್ ಪ್ರಶಸ್ತಿ

ದಿ ಬ್ರೂಟಲಿಸ್ಟ್ ಚಿತ್ರಕ್ಕಾಗಿ ಆಡ್ರಿಯನ್ ಬ್ರಾಡಿ ಮತ್ತು ಅನೋರಾ ಚಿತ್ರಕ್ಕಾಗಿ ಮಿಕ್ಕಿ ಮ್ಯಾಡಿಸನ್ ೨೦೨೫ನೇ ಸಾಲಿನ ಶ್ರೇಷ್ಠ ನಟ ಹಾಗೂ ನಟಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತ ಒಲಿದಿದೆ. 97ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ

ಕಲಾವಿದರಿಗೆ ಡಿಸಿಎಂ ಎಚ್ಚರಿಕೆ ನೀಡಿದ್ದರಲ್ಲಿ ತಪ್ಪೇನಿದೆ ಎಂದ ನಟಿ ರಮ್ಯಾ

ನೆಲ, ಜಲ, ಭಾಷೆಯ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್​ ಎಚ್ಚರಿಕೆಯ ಮಾತುಗಳನ್ನು ಆಡಿರುವುದರಲ್ಲಿ ತಪ್ಪೇನಿದೆ ಎಂದು ನಟಿ ಹಾಗೂ ಕಾಂಗ್ರೆಸ್​ ನಾಯಕಿ ರಮ್ಯಾ ಪ್ರಶ್ನಿಸುವ ಮೂಲಕ ಡಿಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯನಗರದಲ್ಲಿ ನಡೆದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ

ಬೆಂಗಳೂರಲ್ಲಿ  ಇನೊವೇಟಿವ್‌ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ (ಐಫಾ) ಆಯೋಜನೆ: ಡಿಕೆ ಶಿವಕುಮಾರ್‌

“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ

ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ

ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ