ಬ್ಯಾನರ್ ಹಾಕಿಸುವ ವಿಚಾರದಲ್ಲಿ ಬಿಜೆಪಿ ಮುಖಂಡರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಣಗಳ ನಡುವೆ ಉಂಟಾದ ಹೊಡೆದಾಟ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ ಘಟನೆ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ವಾಲ್ಮೀಕಿ ಪುತ್ಥಳಿ ಅನಾವರಣದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವಾಗ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನೇತೃತ್ವದ ಬಿಜೆಪಿ ಕಾರ್ಯಕರ್ತರ ನಡುವೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ಹೊಡೆದಾಟಕ್ಕೆ ತಲುಪಿದೆ.
ಹೊಡೆದಾಟದ ವೇಳೆ ಸ್ಥಳಕ್ಕೆ ಶ್ರೀರಾಮುಲು ಆಗಮಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ತಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ಆದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಲಾಠಿಪ್ರಹಾರ ನಡೆಸಿದ್ದಾರೆ.
ಶ್ರೀರಾಮುಲು ಶಾಸಕ ಆಪ್ತ ನಾರಾ ಭರತ್ ರೆಡ್ಡಿ ಅವರ ಸತೀಶ್ ರೆಡ್ಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜನಾರ್ದನ ರೆಡ್ಡಿ ನೆಲದ ಮೇಲೆ ಬಿದ್ದಿದ್ದ ಬುಲೆಟ್ ತೆಗೆದು ಪ್ರದರ್ಶಿಸಿದ್ದು, ಶ್ರೀರಾಮುಲು ಬೆಂಬಲಿಗರ ಗುಂಡಾಗಿರಿಯನ್ನು ಖಂಡಿಸಿದರು.


