Saturday, October 17, 2026
Menu

ಶಾಲೆಯಲ್ಲಿ ಕುಸಿದು ಐದನೇ ತರಗತಿ ವಿದ್ಯಾರ್ಥಿ ಸಾವು

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಶಾಲೆಯಲ್ಲಿ 12 ವರ್ಷದ ಬಾಲಕನೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಅರ್ಹಾನ್ ಪಾಷಾ (12) ಮೃತಪಟ್ಟ ವಿದ್ಯಾರ್ಥಿ. ನ್ಯೂ ಬ್ಲಾಸಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ತರಗತಿಯಲ್ಲಿದ್ದ ಅರ್ಹಾನ್ ಪಾಷಾ ಸುಸ್ತಾಗುತ್ತಿದೆ ಎಂದು ಶಿಕ್ಷಕಿಯ ಬಳಿ ಹೇಳಿಕೊಂಡಿದ್ದಾನೆ, ಬಳಿಕ ಏಕಾಏಕಿ ಬೆಂಚ್ ಮೇಲೆ ಕುಸಿದು ಬಿದ್ದಿದ್ದಾನೆ.

ಬಾಲಕ ಕುಸಿದು ಬಿದ್ದಾಗ ಪ್ರಾಥಮಿಕ ಚಿಕಿತ್ಸೆಯ ನೆರವು ನೀಡದೆ ಶಾಲಾ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೆ ಜೀವ ಉಳಿಯುವ ಸಾಧ್ಯತೆ ಇತ್ತು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ಬಾಲಕ ಕುಸಿದು ಬಿದ್ದ ಬಳಿಕ 45 ನಿಮಿಷ ಶಾಲಾ ಕೊಠಡಿಯಲ್ಲೇ ಇರಿಸಲಾಗಿತ್ತು. ಬಳಿಕ ಸಿಬ್ಬಂದಿ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಕುಟುಂಬದವರು ಬಂದ ಬಳಿಕವೂ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಶಾಲಾ ವಾಹನ ನೀಡಲು ಸಿಬ್ಬಂದಿ ಹಿಂದೇಟು ಹಾಕಿದರು ಎಂಬ ಆರೋಪವಿದೆ. ಬೈಕ್ ಮೂಲಕ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾಲೆಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ. ಸಿಸಿಟಿವಿ ದೃಶ್ಯಾವಳಿ, ವೈದ್ಯಕೀಯ ವರದಿ ಹಾಗೂ ಶಾಲಾ ಸಿಬ್ಬಂದಿ ಹೇಳಿಕೆಗಳನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *