Thursday, January 30, 2025
Menu

ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್‌ ?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ  ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಗೊಂಡಿದೆ ಎನ್ನಲಾಗಿದೆ.

ಮುಡಾ ಆಯುಕ್ತರು, ರೆವಿನ್ಯು ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಗೊಂಡಿದೆ.

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ನೀಡಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ, ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಕ್ರಮ ಎಸಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಹಾಗೂ ಅವರ ಪತ್ನಿಗೆ ಕ್ಲೀನ್​ಚಿಟ್‌ ನೀಡಿರುವ ಬಗ್ಗೆ ಅಧಿಕೃತ ಮಾಹಿತಿ ನಮಗೆ ಬಂದಿಲ್ಲ. ಅದೇ ವರದಿ ಬಂದಿದ್ದರೂ ನನ್ನ ಹೋರಾಟಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆಯೂ ಪ್ರಗತಿಯಲ್ಲಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.

Related Posts

Leave a Reply

Your email address will not be published. Required fields are marked *