ರಾಂಬನ್ (ಜಮ್ಮು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾಶ್ಮೀರದ ಅವಳಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಮತ್ತು ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸಂಭವಿಸಿದೆ.
ಪ್ರಕೃತಿಯ ವಿಕೋಪದ ಪ್ರತ್ಯೇಕ ಘಟನೆಗಳಲ್ಲಿ ದಂಪತಿ, ಐವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸೇರಿದಂತೆ 11 ಜನರು ಮೃತಪಟ್ಟಿದ್ದಾರೆ.
ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕೆಲವರು ಕಾಣೆಯಾಗಿದ್ದಾರೆ. ರಾಂಬನ್ನ ರಾಜ್ ಗಡ್ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಮೇಘಸ್ಫೋಟ ಹಿನ್ನೆಲೆಯಲ್ಲಿ, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅಧಿಕಾರಿಗಳು ಕಾಣೆಯಾದವರನ್ನು ಹುಡುಕುತ್ತಿದ್ದಾರೆ ಮತ್ತು ಮೇಘಸ್ಫೋಟದಿಂದ ಹಾನಿಗೊಳಗಾದವರಿಗೆ ತಕ್ಷಣದ ಪರಿಹಾರವನ್ನು ಒದಗಿಸಲಾಗುತ್ತಿದೆ.