Tuesday, November 25, 2025
Menu

ಅಂಧ ಮಹಿಳಾ ವಿಶ್ವಕಪ್ ತಂಡದ ರಾಜ್ಯ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

indian blaind world cup

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು,
ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

Related Posts

Leave a Reply

Your email address will not be published. Required fields are marked *