Menu

ಮೈಕ್ರೊ ಫೈನಾನ್ಸ್ ಕಿರುಕುಳದಿಂದ ಬಲಿಯಾದವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ನಂತರ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಮೈಕ್ರೊ ಫೈನಾನ್ಸ್ ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಕಟಿಸಿದರು.

ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೈಕ್ರೊ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯಲ್ಲೂ ಕೂಡ ಕಡಿಮೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ ಎಂದರು.

Related Posts

Leave a Reply

Your email address will not be published. Required fields are marked *