ಝೀರೋ ಟ್ರಾಫಿಕ್ ವ್ಯವಸ್ಥೆ ನಿರಾಕರಿಸಿರಿದ ಸಿಎಂ ಬಸವರಾಜ ಬೊಮ್ಮಾಯಿ

ಝೀರೋ ಟ್ರಾಫಿಕ್ ವ್ಯವಸ್ಥೆ ನಿರಾಕರಿಸಿರಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್ ಹಾಕಿ ಮಾದರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ತಾವು ಸಂಚರಿಸುವಂತ ರಸ್ತೆಗಳಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡದಂತೆ ಪೊಲೀಸರಿಗೆ ಸೂಚನೆ ನೀಡುವ ಮೂಲಕ, ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ರಾಜಕೀಯ ನಾಯಕರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ವ್ಯವಸ್ಥೆಯಿರುತ್ತದೆ, ಆದರೆ ತಮಗೆ ಬೆಂಗಳೂರು ನಗರದಲ್ಲಿ ಆ ಸೌಲಭ್ಯ ಬೇಡ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಾವು ಸಂಚರಿಸುವಾಗ ಸಿಗ್ನಲ್ ಫ್ರೀ ಮಾಡಿಕೊಡಲು ಸೂಚಿಸಿರುವ ಸಿಎಂ, ತಮ್ಮ ಸಂಚಾರ ವೇಳೆ ಆಂಬ್ಯುಲೆನ್ಸ್ ಗೆ ಹೋಗಲು ಅವಕಾಶ ಮಾಡಿಕೊಡುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಸಂಚಾರಿ ಕಂಟ್ರೋಲ್​ನಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು.

,

Leave a Reply

Your email address will not be published. Required fields are marked *