ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು, ಅ 17  ಕರೋನ ಆತಂಕದ ನಡುವೆಯೂ ವಿಶ್ವ ವಿಖ್ಯಾತ
ಮೈಸೂರು ದಸರಾ ಮಹೋತ್ಸವಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಡಾ.ಸಿ.ಎನ್.
ಮಂಜುನಾಥ್ ಅವರು ಶನಿವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಇದರಿಂದ ಸಾಂಸ್ಕೃತಿಕ ನಗರಿಯಲ್ಲಿ ದಸರಾ ಚಟುವಟಿಕೆಗಳು ಗರಿಕೆದರಿವೆ. ಕೊರೊನಾ
ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ
ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದೆ.
ಇಂದು ಬೆಳಗ್ಗೆ 7.45 ರ ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ
ನವರಾತ್ರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು .
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ.
ಸೋಮಶೇಖರ್ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸೇರಿದಂತೆ ಅನೇಕ ಗಣ್ಯರು
ಭಾಗಿಯಾಯಾಗಿದ್ದರು .

,

Leave a Reply

Your email address will not be published. Required fields are marked *