Tuesday, December 02, 2025
Menu

ಸಿಎಂ ಬದಲಾವಣೆ: ಸರಿಯಾದ ಸಮಯದಲ್ಲಿ  ಹೈಕಮಾಂಡ್ ಸೂಕ್ತ ನಿರ್ಧಾರವೆಂದ ಡಿಕೆ ಸುರೇಶ್

“ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ. “ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು. ಸಿಎಂ ಬದಲಾವಣೆ ವಿಚಾರವಾಗಿ ನೀವು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೀರಾ ಎಂದು ಕೇಳಿದಾಗ, “ನನ್ನ ಖಾಸಗಿ ಭೇಟಿ ಬಗ್ಗೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಉಪಾಹಾರ ಕೂಟ ನಡೆದಿದ್ದು, ಮಂಗಳವಾರವೂ ಒಂದು ಉಪಾಹಾರಕೂಟ ನಡೆಯಲಿದೆ.” ಎಂದರು.

ಇಬ್ಬರೂ ನಾಯಕರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಉತ್ತರಿಸಿದರು. ಸಹೋದರನ ಮೂಲಕ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಇದನ್ನು ನೀವು (ಮಾಧ್ಯಮ) ಹೇಳುತ್ತಿದ್ದೀರಿ” ಎಂದರು.

ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದಕ್ಕೆ ರಾಜಕೀಯವಾಗಿ ಉತ್ತರ ಕೊಡುವುದಕ್ಕಿಂತ, ಯಾರು ಯಾವ ಸಂದರ್ಭದಲ್ಲಿ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದ್ದು, ನಾನು ಹೆಚ್ಚಾಗಿ ಹೇಳುವ ಅಗತ್ಯವಿಲ್ಲ” ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *