ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಷ್ಟೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು ಯಾವುದೇ ರಾಜಕೀಯ ಚರ್ಚೆ ಆಗಿಲ್ಲ.
ಇಂದು ತಮಿಳುನಾಡಿನ ಗುಡಲೂರು ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ವಿಶೇಷ ವಿಮಾನದಿಂದ 2.15ಕ್ಕೆ ಬಂದಿಳಿದರು. ಐದು ನಿಮಿಷಕ್ಕೆ ಮುಂಚೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ 2.20ಕ್ಕೆ ಪೂರ್ವನಿಗಧಿತ ಕಾರ್ಯಕ್ರಮದ ನಿಮಿತ್ತ ಬೇರೆ ವಿಮಾನದ ಮೂಲಕ ತಮಿಳುನಾಡಿನತ್ತ ಪಯಣಿಸಿದರು.
ಬಳಿಕ ಮಾದ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ.ಅಧಿಕಾರ ಹಸ್ತಾಂತರ ಎಂಬುದು ಕೇವಲ ಮಾದ್ಯಮ ಸೃಷ್ಠಿಯಷ್ಟೇ ಆಗಿದೆ. ಈಗಾಗಲೇ ನಾನು ಡಿ.ಕೆ.ಶಿವಕುಮಾರ್ ಇಬ್ಬರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದೇವೆ. ಇನ್ನೂ ಸ್ಥಳೀಯವಾಗಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಿ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಯಿಸಿ ಅವರೊಟ್ಟಿಗೂ ಈ ಸಂಬಂಧ ಚರ್ಚಿಸಲಾಗಿದೆ ಎಂದು ಹೇಳಿದರು.
ಇನ್ನೂ ಬಿಬಿಎಂಪಿ, ತಾಲ್ಲೂಕು ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಥವಾ ಪ್ರತ್ಯೇಕಸ್ಪರ್ಧೆಯಿಂದ ನಮಗೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಜೆಟ್ ತಯಾರಿ ನಡೆಯುತ್ತಿದೆ ಎಂದು ಹೇಳಿದರು. ಅಲ್ಲದೆ ಅವರನ್ನು ಸಂಜೆ ಬೀಳ್ಕೊಡುಗೆ ಕೊಡುವುದಾಗಿ ತಿಳಿಸಿದರು.


