Menu

ಕಳ್ಳನ ಚಿನ್ನ ಎಗರಿಸಿದ ಸಿಎಂ ಗೋಲ್ಡ್‌ ಮೆಡಲ್‌ ವಿಜೇತ ಪೊಲೀಸ್‌: ಎಸಿಪಿಗೆ ದೂರು

ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್‌ ಇನ್ಸ್‌ಪೆಕ್ಟರ್‌ ಬಾಲಕೃಷ್ಣ ನಾಯಕ್‌ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್‌ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ. ಕೋಟೆಕಾರ್‌ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ ಪದಕ ಲಭಿಸಿದೆ.

ಮಂಗಳೂರು ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್‌ ಪ್ರಕರಣವೊಂದನ್ನು ಮುಚ್ಚಿ ಹಾಕಲು 3 ಲಕ್ಷ ರೂಪಾಯಿ ಲಂಚದ ಜೊತೆ ಆರೋಪಿಯ ಮೈಮೇಲಿದ್ದ 50 ಗ್ರಾಮ್​ ಚಿನ್ನ ಕಿತ್ತುಕೊಂಡಿದ್ದಾರೆಂದು ಆರೋಪಿಸಿ ಎಸಿಪಿಗೆ ದೂರು ಸಲ್ಲಿಕೆಯಾಗಿದೆ.

ಮಾರ್ಚ್ 13ರಂದು ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಳ್ತಂಗಡಿ ಮೂಲದ ಯುವಕನೊಬ್ಬನ ತಾಯಿ ಇನ್ಸ್‌ಪೆಕ್ಟರ್‌ ಬಾಲಕೃಷ್ಣ ವಿರುದ್ಧ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ಅವರಿಗೆ ದೂರು ನೀಡಿದ್ದಾರೆ.

ಕಳವು ಪ್ರಕರಣದಲ್ಲಿ ಇದ್ದ ಎಂದು ನನ್ನ ಮಗನನ್ನು ಉಳ್ಳಾಲ ಪೊಲೀಸರು 2024ರ ಜೂನ್ 28ರಂದು ವಶಕ್ಕೆ ಪಡೆದಿದ್ದರು. ಮಾತನಾಡಲೆಂದು ಮರುದಿನ ಉಳ್ಳಾಲ ಠಾಣೆಗೆ ಕರೆಸಿಕೊಂಡಿದ್ದರು. ಪ್ರಕರಣದಲ್ಲಿ ಕಳವಾದ ಚಿನ್ನದ ರಿಕವರಿ ಆಗಬೇಕಿದೆ ಎಂದು ಹೇಳಿದ ಇನ್ಸ್‌ಪೆಕ್ಟರ್‌, ಪ್ರಕರಣ ಮುಚ್ಚಿ ಹಾಕಲು 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಅದರಂತೆ ಜು. 1ರಂದು ಠಾಣೆಯಲ್ಲೇ ಅವರಿಗೆ ಹಣ ನೀಡಿದ್ದೇನೆ. ಹಣ ಪಡೆದುಕೊಂಡಿದ್ದರೂ ಮಗನನ್ನು ಆರೋಪಿಯಾಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಗನ ಮೈಯಲ್ಲಿದ್ದ ಬಂಗಾರದ ಸರ, ಒಂದು ಬ್ರಾಸ್ಲೇಟ್, ಒಂದು ಕಡಗ, ಮೂರು ಉಂಗುರ, ಒಂದು ಓಲೆ ಸೇರಿ ಒಟ್ಟು 50 ಗ್ರಾಮ್ ಚಿನ್ನಾಭರಣ ಮುಟ್ಟುಗೋಲು ಹಾಕಿಕೊಂಡಿದ್ದರು. ಇದರ ಲೆಕ್ಕವನ್ನು ಚಾರ್ಜ್ ಶೀಟ್‌ನಲ್ಲಿ ಹಾಕುತ್ತೇನೆ, ಆಮೇಲೆ ರಿಕವರಿ ಮಾಡಿಕೊಳ್ಳಬಹುದು ಎಂದಿದ್ದರು.

ಈಗ ಕೋರ್ಟಿಗೆ ಸಲ್ಲಿಸಿರುವ ಚಾರ್ಜ್ ಶೀಟಿನಲ್ಲಿ ಈ ಚಿನ್ನಾಭರಣದ ಬಗ್ಗೆ ಉಲ್ಲೇಖಿಸಿಲ್ಲ. ಮಗನಿಂದ ಖಾಲಿ ಕಾಗದಗಳಿಗೆ ಸಹಿ ಮಾಡಿಸಿದ್ದಾರೆ. ಆರೋಪಿ ಇನ್‌ಸ್ಪೆಕರ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಯಿ ಲಿಖಿತ ದೂರು ನೀಡಿದ್ದರು. ಈ ಹಿಂದೆ ಬಾಲಕೃಷ್ಣ ಮೈಸೂರು ಜಿಲ್ಲೆಯ ವಿಜಯನಗರದಲ್ಲಿ ಕರ್ತವ್ಯದಲ್ಲಿದ್ದಾಗ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದಲ್ಲಿ ಎಸಿಬಿ ದಾಳಿಯಾಗಿತ್ತು.

Related Posts

Leave a Reply

Your email address will not be published. Required fields are marked *